ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ತೀವ್ರ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಹಾರಾಷ್ಟ್ರದ ಥಾಣೆಯ ಆಕೃತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ವಿನೋದ್ ಕಾಂಬ್ಳಿಗೆ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿದೆ ಎಂದು ವೈದ್ಯರು ತಿಳಿಸಿದ್ದಾರೆ. ಮೂತ್ರ ಸೋಂಕು ಸೇರಿದಂತೆ ಹಲವು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ವಿನೋದ್ ಕಾಂಬ್ಳಿ ಇದೀಗ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟುವ ಸಮಸ್ಯೆಯಿಂದ ಬಳಲುತ್ತಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಆಕೃತಿ ಆಸ್ಪತ್ರೆ ವೈದ್ಯ ಡಾ.ವಿವೇಕ್ ತ್ರಿವೇದಿ, ನಾವು ವಿನೋದ್ ಕಾಂಬ್ಳಿ ಆರೋಗ್ಯದ ಬಗ್ಗೆ ತೀವ್ರ ನಿಗಾ ವಹಿಸಿದ್ದೇವೆ. ಅವರಿಗೆ ಸಂಪೂರ್ಣವಾಗಿ ಉಚಿತ ಚಿಕಿತ್ಸೆ ನೀಡಲಾಗುತ್ತದೆ. ಆಸ್ಪತ್ರೆಯ ಉಸ್ತುವಾರಿಯಾಗಿರುವ ಎಸ್.ಸಿಂಗ್ ವಿನೋದ್ ಕಾಂಬ್ಳಿ ಅವರಿಗೆ ಜೀವನ ಪರ್ಯಂತ ಉಚಿತ ಚಿಕಿತ್ಸೆ ನೀಡಲು ನಿರ್ಧರಿಸಿದ್ದಾರೆ ಎಂದು ತಿಳಿಸಿದ್ದಾರೆ. ಆಸ್ಪತ್ರೆ ಉಸ್ತುವಾರಿಯ ನಿರ್ಧಾರಕ್ಕೆ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ.
ಚಿಕಿತ್ಸೆ ಪಡೆಯುತ್ತಿರುವ ವಿನೋದ್ ಕಾಂಬ್ಳಿ, ವೈದ್ಯರ ಸಲಹೆಯನ್ನು ಚಾಚೂ ತಪ್ಪದೇ ಪಾಲಿಸುತ್ತೇನೆ. ವೈದ್ಯರಿಂದಾಗಿಯೇ ನಾನಿಂದು ಬದುಕಿದ್ದೇನೆ. ಉಚಿತ ಚಿಕಿತ್ಸೆ ನೀಡುವುದಾಗಿ ಘೋಷಿಸಿರುವ ವೈದ್ಯರ ನಿರ್ಧಾರಕ್ಕೆ ಭಾವುಕರಾಗಿ ಧನ್ಯವಾದ ತಿಳಿಸಿದ್ದಾರೆ.