
ಮಾಸ್ ಸಿನಿಮಾಗಳ ಮೂಲಕವೇ ಸಾಕಷ್ಟು ಜನಪ್ರಿಯತೆ ಪಡೆದಿರುವ ಮರಿ ಟೈಗರ್ ವಿನೋದ್ ಪ್ರಭಾಕರ್ ನಟನೆಯ ಬಹುನಿರೀಕ್ಷಿತ ‘ಫೈಟರ್’ ಸಿನಿಮಾ ಇಂದು ರಾಜ್ಯದ್ಯಂತ ತೆರೆ ಕಂಡಿದ್ದು, ಪ್ರೇಕ್ಷಕರ ಗಮನ ಸೆಳೆದಿದೆ. ಆಕ್ಷನ್ ಥ್ರಿಲ್ಲರ್ ಲವ್ ಸ್ಟೋರಿ ಕಥಾ ಹಂದರ ಹೊಂದಿರುವ ಈ ಚಿತ್ರದಲ್ಲಿ ವಿನೋದ್ ಪ್ರಭಾಕರ್ ಪಾವನ ಗೌಡ ಹಾಗೂ ಲೇಖ ಚಂದ್ರ ಮುಖ್ಯ ಭೂಮಿಕೆಯಲ್ಲಿದ್ದು, ನೂತನ್ ಉಮೇಶ್ ನಿರ್ದೇಶನ ಮಾಡಿದ್ದಾರೆ.
ಆಕಾಶ್ ಎಂಟರ್ಪ್ರೈಸಸ್ ಬ್ಯಾನರ್ ನಡಿ ಕೆ ಸೋಮಶೇಖರ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದು, ಗುರುಕಿರಣ್ ಮ್ಯೂಸಿಕ್ ಕಂಪೋಸ್ ಮಾಡಿದ್ದಾರೆ. ಶೇಖರ್ ಚಂದ್ರ ಛಾಯಾಗ್ರಹಣವಿದ್ದು, ಕೆ ಎಂ ಪ್ರಕಾಶ್ ಸಂಕಲನವಿದೆ.
ವಿನೋದ್ ಪ್ರಭಾಕರ್ ಇಂದು ಬೆಳಗ್ಗೆ 9:30 ರಂದು ಗಾಂಧಿನಗರದ ತ್ರಿವೇಣಿ ಥಿಯೇಟರಲ್ಲಿ ಅಭಿಮಾನಿಗಳೊಂದಿಗೆ ಈ ಸಿನಿಮಾ ವೀಕ್ಷಿಸುವ ಮೂಲಕ ಎಂಜಾಯ್ ಮಾಡಿದ್ದಾರೆ.
