ನೂತನ್ ಉಮೇಶ್ ನಿರ್ದೇಶನದ ವಿನೋದ್ ಪ್ರಭಾಕರ್ ಅಭಿನಯದ ಬಹು ನಿರೀಕ್ಷಿತ ‘ಫೈಟರ್’ ಚಿತ್ರದ ಟೀಸರ್ ಅನ್ನು ಇಂದು ಡಿ ಜಿ ಕೆ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದ್ದು, ಸಿನಿಪ್ರೇಕ್ಷಕರ ಗಮನ ಸೆಳೆದಿದೆ. ವಿನೋದ್ ಪ್ರಭಾಕರ್ ಅಭಿಮಾನಿಗಳಿಂದ ಲೈಕ್ಸ್ ಹಾಗೂ ಕಮೆಂಟ್ಸ್ ಗಳ ಸುರಿಮಳೆ ಹರದು ಬಂದಿವೆ.
ಆಕಾಶ್ ಎಂಟರ್ಪ್ರೈಸಸ್ ಬ್ಯಾನರ್ ನಡಿ ಕೆ. ಸೋಮಶೇಖರ್ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದು, ಗುರುಕಿರಣ್ ಸಂಗೀತ ಸಂಯೋಜನೆ ನೀಡಿದ್ದಾರೆ. ಶೇಖರ್ ಚಂದ್ರ ಅವರ ಛಾಯಾಗ್ರಹಣ, ಕವಿರಾಜ ಹಾಗೂ ಸುಮಂತ್ ಸಾಹಿತ್ಯವಿದೆ.
ಆಕ್ಷನ್ ಎಂಟರ್ಟೈನರ್ ಕಥಾಹಂದರ ಹೊಂದಿರುವ ಈ ಸಿನಿಮಾದಲ್ಲಿ ವಿನೋದ್ ಪ್ರಭಾಕರ್, ಲೇಖಾ ಚಂದ್ರ, ಗಿರಿಜಾ ಲೋಕೇಶ್, ನಿರೋಷ, ಪಾವನ ಸೇರಿದಂತೆ ಹಲವರ ತಾರಾಬಳಗವಿದೆ.