
ಮರಿ ಟೈಗರ್ ವಿನೋದ್ ಪ್ರಭಾಕರ್ ನಟನೆಯ ‘ಫೈಟರ್’ ಸ್ಯಾಂಡಲ್ವುಡ್ ನಲ್ಲಿ ಭರ್ಜರಿ ಸೌಂಡ್ ಮಾಡುತ್ತಿದ್ದು, ಇತ್ತೀಚಿಗಷ್ಟೇ ಈ ಚಿತ್ರದ ಟ್ರೈಲರ್ ಮತ್ತು ಪ್ರಿ ರಿಲೀಸ್ ಇವೆಂಟ್ ಕಾರ್ಯಕ್ರಮವನ್ನು ಅದ್ದೂರಿಯಾಗಿ ನೆರವೇರಿಸಿದ್ದಾರೆ. ಶ್ರೀನಗರ ಕಿಟ್ಟಿ, ದುನಿಯಾ ವಿಜಯ್ ಸೇರಿದಂತೆ ಹಲವಾರು ಕಲಾವಿದರು ಈ ಕಾರ್ಯಕ್ರಮಕ್ಕೆ ಆಗಮಿಸಿ ಶುಭ ಕೋರಿದ್ದಾರೆ.
ನೂತನ್ ಉಮೇಶ್ ನಿರ್ದೇಶನದ ಈ ಚಿತ್ರದಲ್ಲಿ ವಿನೋದ್ ಪ್ರಭಾಕರ್ ಜೊತೆ ಲೇಖ ಚಂದ್ರ ಹಾಗೂ ಪಾವನ ಗೌಡ ನಾಯಕಿಯರಾಗಿ ಅಭಿನಯಿಸಿದ್ದು, ಆಕಾಶ್ ಎಂಟರ್ಪ್ರೈಸಸ್ ಬ್ಯಾನರ್ ನಡಿ ಕೆ ಸೋಮಶೇಖರ್ ಬಂಡವಾಳ ಹೂಡಿದ್ದಾರೆ. ಇನ್ನುಳಿದಂತೆ ಶೇಖರ್ ಚಂದ್ರ ಛಾಯಾಗ್ರಹಣವಿದ್ದು, ಕೆ ಎಂ ಪ್ರಕಾಶ್ ಸಂಕಲನವಿದೆ. ಗುರುಕಿರಣ್ ಸಂಗೀತ ಸಂಯೋಜನೆ ನೀಡಿದ್ದಾರೆ.

