alex Certify BREAKING : ನೀತಿ ಸಂಹಿತೆ ಉಲ್ಲಂಘನೆ ; ಕಾಂಗ್ರೆಸ್ ಅಭ್ಯರ್ಥಿ ‘ಸೌಮ್ಯಾರೆಡ್ಡಿ’ ವಿರುದ್ಧ ‘FIR’ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ನೀತಿ ಸಂಹಿತೆ ಉಲ್ಲಂಘನೆ ; ಕಾಂಗ್ರೆಸ್ ಅಭ್ಯರ್ಥಿ ‘ಸೌಮ್ಯಾರೆಡ್ಡಿ’ ವಿರುದ್ಧ ‘FIR’ ದಾಖಲು

ಬೆಂಗಳೂರು : ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇರೆಗೆ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾರೆಡ್ಡಿ ವಿರುದ್ಧ ಬೆಂಗಳೂರಿನ ಕಲಾಸಿಪಾಳ್ಯ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.

ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ‘  5 ಗ್ಯಾರಂಟಿ ಕೊಟ್ಟಿದ್ದೇವೆ, ನಾವು ನುಡಿದಂತೆ ನಡೆದಿದ್ದೇವೆ… ‘ ಎಂಬ ಕರಪತ್ರ ಹಂಚಿದ ಆರೋಪದ ಮೇರೆಗೆ ಚುನಾವಣಾಧಿಕಾರಿ  ಸಂತೋಷ್   ನೀಡಿದ ದೂರಿನ ಮೇರೆಗೆ ಎಫ್ ಐ ಆರ್ ದಾಖಲಾಗಿದೆ.

ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾರೆಡ್ಡಿ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಜಶೇಖರ್ ಎಂಬುವವರ ಮೇಲೆ ಎಫ್ ಐ ಆರ್ ದಾಖಲಾಗಿದೆ .ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ಈ ಬಾರಿ ಭಾರೀ ಕುತೂಹಲ ಹುಟ್ಟುಹಾಕಿದೆ. ಸೌಮ್ಯಾ ರೆಡ್ಡಿ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ತಮ್ಮ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...