ಬಾಂಗ್ಲಾದೇಶದಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು, 100 ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಹಿಂಸಾಚಾರದ ಹಿನ್ನೆಲೆ ಇಂಟರ್ ನೆಟ್ ಸೇವೆ, ಎಲ್ಲಾ ರೈಲ್ವೆ ಸಂಚಾರ ಸ್ಥಗಿತಗೊಳಿಸಲಾಗಿದೆ.
ಬಾಂಗ್ಲಾದೇಶ ಸರ್ಕಾರದ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ಹೆಚ್ಚುತ್ತಿರುವ ಮಧ್ಯೆ ಹಿಂಸಾಚಾರ ಪೀಡಿತ ದೇಶದಲ್ಲಿ ಎಲ್ಲಾ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಪ್ರಧಾನಿ ಶೇಖ್ ಹಸೀನಾ ಅವರ ರಾಜೀನಾಮೆಗೆ ಒತ್ತಾಯಿಸಿ ವಿದ್ಯಾರ್ಥಿ ಅಸಹಕಾರ ಚಳವಳಿಯನ್ನು ನಿಯಂತ್ರಿಸುವ ಸಲುವಾಗಿ ಸರ್ಕಾರ ಆಗಸ್ಟ್ 5 ರಿಂದ 7 ರವರೆಗೆ ಮೂರು ದಿನಗಳ ಸಾರ್ವತ್ರಿಕ ರಜಾದಿನವನ್ನು ಘೋಷಿಸಿದೆ . ದೇಶದಲ್ಲಿ ಪ್ರತಿಭಟನೆಗಳನ್ನು ಸ್ಥಗಿತಗೊಳಿಸುವ ಸಲುವಾಗಿ ದೇಶದ ಕೆಲವು ಭಾಗಗಳಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಯಿತು ಮತ್ತು ಢಾಕಾದಲ್ಲಿ ಕರ್ಫ್ಯೂ ಘೋಷಿಸಲಾಯಿತು.