ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಪ್ರತ್ಯೇಕತಾವಾದಿ ನಾಯಕ ಯಾಸಿನ್ ಮಲಿಕ್ ಗೆ ದೆಹಲಿ ಎನ್ಐಎ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಇದರ ಬೆನ್ನಲ್ಲೇ ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿ ಹಿಂಸಾಚಾರ ನಡೆದಿದೆ.
ಯಾಸಿನ್ ಮಲಿಕ್ ಬೆಂಬಲಿಗರು ಶ್ರೀನಗರದಲ್ಲಿ ಹಿಂಸಾಚಾರ ನಡೆಸಿದ್ದಾರೆ. ಕಲ್ಲು ತೂರಾಟ ನಡೆಸಿ ಪೊಲೀಸರೊಂದಿಗೆ ಘರ್ಷಣೆಗಿಳಿದಿದ್ದಾರೆ. ಉದ್ರಿಕ್ತರನ್ನು ಚದುರಿಸಲು ಪೊಲೀಸರು ಹರಸಾಹಸ ನಡೆಸಿದ್ದು, ಪರಿಸ್ಥಿತಿ ನಿಯಂತ್ರಿಸಲು ಗಾಳಿಯಲ್ಲಿ ಗುಂಡು ಹಾರಿಸಲಾಗಿದೆ. ಘಟನಾ ಸ್ಥಳಕ್ಕೆ ಹೆಚ್ಚಿನ ಸಂಖ್ಯೆಯ ಪೊಲೀಸರು, ಭದ್ರತಾ ಪಡೆ ಸಿಬ್ಬಂದಿ ರವಾನಿಸಲಾಗಿದೆ.