alex Certify ತ್ರಿವರ್ಣ ಧ್ವಜದಲ್ಲಿ ಸ್ಕೂಟಿ ಸ್ವಚ್ಚಗೊಳಿಸಿದವನಿಗೆ ಸಂಕಷ್ಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತ್ರಿವರ್ಣ ಧ್ವಜದಲ್ಲಿ ಸ್ಕೂಟಿ ಸ್ವಚ್ಚಗೊಳಿಸಿದವನಿಗೆ ಸಂಕಷ್ಟ

ನಮ್ಮ ದೇಶದಲ್ಲಿ ರಾಷ್ಟ್ರಧ್ವಜವನ್ನು ಗೌರವಿಸುವುದನ್ನು ಪ್ರತಿಯೊಬ್ಬ ವ್ಯಕ್ತಿಗೂ ಬಾಲ್ಯದಿಂದಲೇ ಕಲಿಸಲಾಗುತ್ತದೆ. ತ್ರಿವರ್ಣ ಧ್ವಜಕ್ಕೆ ಅಗೌರವ ತೋರಿದರೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ನೀಡುವ ಅವಕಾಶವೂ ಇದೆ.

ಹೀಗಿರುವಾಗ 52 ವರ್ಷದ ವ್ಯಕ್ತಿಯೊಬ್ಬರು ತಮ್ಮ ದ್ವಿಚಕ್ರ ವಾಹನವನ್ನು ಸ್ವಚ್ಛಗೊಳಿಸಲು ರಾಷ್ಟ್ರಧ್ವಜವನ್ನು ಬಳಸುತ್ತಿರುವುದು ಕಂಡುಬಂದಿದೆ. ಈಶಾನ್ಯ ದೆಹಲಿಯ ಭಜನ್ಪುರ ಪ್ರದೇಶದಲ್ಲಿ ಘಟನೆ ನಡೆದಿದ್ದು, ವ್ಯಕ್ತಿ ಉತ್ತರ ಘೋಂಡಾ ಪ್ರದೇಶದವರು.

ವಿಡಿಯೊದಲ್ಲಿ, ವ್ಯಕ್ತಿ ಮಡಿಸಿದ ಧ್ವಜದಿಂದ ತನ್ನ ಬಿಳಿ ಸ್ಕೂಟರ್​ ಅನ್ನು ಸ್ವಚ್ಛಗೊಳಿಸುವ ಮತ್ತು ಧೂಳು ತೆಗೆಯುತ್ತಿರುವುದನ್ನು ಕಾಣಬಹುದು. ಸ್ಥಳೀಯರು ಚಿತ್ರೀಕರಿಸಿದ ಘಟನೆಯ ವಿಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಅಪ್​ಲೋಡ್​ ಮಾಡಿದ ನಂತರ ವಿಷಯವು ಮುನ್ನೆಲೆಗೆ ಬಂದಿದ್ದು, ಸಾಕಷ್ಟು ಆಕ್ರೋಶ ವ್ಯಕ್ತವಾಯಿತು.

ವಿಡಿಯೊ ವೈರಲ್​ ಆದ ನಂತರ ದೆಹಲಿ ಪೊಲೀಸರು ವ್ಯಕ್ತಿಯ ವಿರುದ್ಧ ಎಫ್​ಐಆರ್​ ದಾಖಲಿಸಿದ್ದಾರೆ, ಈ ವಿಷಯದಲ್ಲಿ ಕಾನೂನು ಕ್ರಮವನ್ನು ಪ್ರಾರಂಭಿಸಲಾಗಿದೆ. ರಾಷ್ಟ್ರೀಯ ಗೌರವಕ್ಕೆ ಅವಮಾನ ತಡೆ ಕಾಯಿದೆ, 1971ರ ಸೆಕ್ಷನ್​ 2ರ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಹಾಗೆಯೇ, ಆ ವ್ಯಕ್ತಿ ಬಳಸಿದ ಧ್ವಜ ಮತ್ತು ಆತನ ಸ್ಕೂಟಿಯನ್ನೂ ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದರು.

ಇದು ಉದ್ದೇಶಪೂರ್ವಕವಾಗಿಲ್ಲ, ಆಕಸ್ಮಿಕ ಎಂದು ಆರೋಪಿ ಒಪ್ಪಿಕೊಂಡಿದ್ದು, ನ್ಯಾಯಾಲಯದ ಮುಂದೆ ಹಾಜರುಪಡಿಸಲು ನಿರ್ಧರಿಸಿರುವುದಾಗಿ ಪೊಲೀಸರು ತಿಳಿಸಿದರು.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...