alex Certify ಕೊರೊನಾ ಭಯ ಮರೆಸುತ್ತೆ ಈ ವಿಡಿಯೋ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೊನಾ ಭಯ ಮರೆಸುತ್ತೆ ಈ ವಿಡಿಯೋ

ಪ್ರತಿಯೊಬ್ಬರೂ ಫಿಟ್ನೆಸ್ ಗೆ ಹೆಚ್ಚಿನ ಮಹತ್ವ ನೀಡ್ತಿದ್ದಾರೆ. ಕೊರೊನಾ ಸಂಕಷ್ಟದ ಮಧ್ಯೆ ತಮಾಷೆ ವಿಡಿಯೋಗಳು ವೈರಲ್ ಆಗ್ತಿವೆ. ಇದು ಜನರಲ್ಲಿ ಸಕಾರಾತ್ಮಕ ಶಕ್ತಿಯನ್ನು ಹೆಚ್ಚು ಮಾಡ್ತಿದೆ. ನೋವನ್ನು ಮರೆಸುತ್ತಿದೆ. ಕೊರೊನಾ ಸಂದರ್ಭದಲ್ಲೂ ಕೆಲ ವಯಸ್ಸಾದವರಲ್ಲಿ ಜೀವನೋತ್ಸಾಹ ಕಡಿಮೆಯಾಗಿಲ್ಲ. ಇದಕ್ಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವಿಡಿಯೋ ಉತ್ತಮ ನಿದರ್ಶನ.

ವಿದೇಶದ ವೃದ್ಧ ದಂಪತಿ ರಸ್ತೆಯಲ್ಲಿ ಭರ್ಜರಿ ಡಾನ್ಸ್ ಮಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್ ಆಗಿದೆ. ಈ ವೀಡಿಯೊವನ್ನು ಈವರೆಗೆ 5 ಲಕ್ಷಕ್ಕೂ ಹೆಚ್ಚು ಜನರು ವೀಕ್ಷಿಸಿದ್ದಾರೆ. ಸಾಕಷ್ಟು ಮೆಚ್ಚುಗೆಯ ಕಮೆಂಟ್ ಬರ್ತಿದೆ. 4 ಸಾವಿರಕ್ಕೂ ಹೆಚ್ಚು ಜನರು ಈ ವೀಡಿಯೊವನ್ನು ರಿಟ್ವೀಟ್ ಮಾಡಿದ್ದಾರೆ. ವೃದ್ಧ ದಂಪತಿ ಡಾನ್ಸ್ ನೋಡಿದವರ ಮನಸ್ಸಿನಲ್ಲಿ ಬದುಕುವ ಉತ್ಸಾಹ ಬರಲಿದೆ.

ದೇಶ-ವಿದೇಶದಲ್ಲಿ ಕೊರೊನಾ ಸೋಂಕು ಹೆಚ್ಚಾಗಿದೆ. ಜನರು ಪ್ರತಿ ಕ್ಷಣ ಭಯದಿಂದ ಬದುಕುತ್ತಿದ್ದಾರೆ. ಭವಿಷ್ಯದ ಬಗ್ಗೆ ಆಲೋಚನೆ ಮಾಡುವುದು ಕಷ್ಟವಾಗಿದೆ. ಇಂಥ ಸಂದರ್ಭದಲ್ಲಿ ವೃದ್ಧರ ಉತ್ಸಾಹ ಖುಷಿ ನೀಡುತ್ತದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...