ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಯು ಮಧ್ಯಪ್ರದೇಶದ ಬುರ್ಹಾನ್‌ಪುರ ಜಿಲ್ಲೆಯ ಬೋದರ್ಲಿ ಗ್ರಾಮಕ್ಕೆ ತಲುಪಿದಾಗ ಅಲ್ಲಿ ಅವರು ರಾಯಲ್ ಎನ್‌ಫೀಲ್ಡ್ ಬೈಕ್ನಲ್ಲಿ ಸವಾರಿ ಮಾಡಿದ್ದು ಅದರ ವಿಡಿಯೋ ವೈರಲ್ ಆಗಿದೆ.
ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 500 ಡೆಸರ್ಟ್ ಸ್ಟಾರ್ಮ್ ಇದರಲ್ಲಿ ರಾಹುಲ್ ಗಾಂಧಿ ಸವಾರಿ ಮಾಡಿದರು. ಈ ವಿಡಿಯೋವನ್ನು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಸದಸ್ಯ ಶ್ರೀನಿವಾಸ್ ಬಿವಿ ಅವರು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ: “ರಾಹುಲ್ ಗಾಂಧಿ ಬುಲೆಟ್ ಸವಾರಿ ಮಾಡಿದಾಗ…” ಎಂದು ಅವರು ಶೀರ್ಷಿಕೆ ಕೊಟ್ಟಿದ್ದಾರೆ.
ಹೀಗೆ ಅವರು ಸವಾರಿ ಮಾಡುತ್ತಿದ್ದ ಸಂದರ್ಭದಲ್ಲಿ ರಾಹುಲ್ ಗಾಂಧಿಯ ಸುತ್ತಲೂ ಜನರು ಗುಂಪು ಸೇರಿದರು. ಅವರನ್ನು ಚದುರಿಸಲು ಭದ್ರತಾ ಅಧಿಕಾರಿಗಳು ಹರಸಾಹಸ ಪಡುವುದನ್ನು ವಿಡಿಯೋದಲ್ಲಿ ನೋಡಬಹುದು. ಈ ವಿಡಿಯೋ ಅನ್ನು ಇದಾಗಲೇ ಒಂದು ಲಕ್ಷಕ್ಕೂ ಅಧಿಕ ಮಂದಿ ವೀಕ್ಷಿಸಿದ್ದು, ತಮ್ಮದೇ ಆದ ರೀತಿಯಲ್ಲಿ ವಿಶ್ಲೇಷಣೆ ಮಾಡುತ್ತಿದ್ದಾರೆ.