ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋ ಒಂದು ನಿಜಕ್ಕೂ ಆಘಾತಕಾರಿಯಾಗಿದೆ. ಪತಿಯೊಬ್ಬ ಹಾಡಹಗಲೇ ನಡು ರಸ್ತೆಯಲ್ಲಿ ತನ್ನ ಪತ್ನಿಗೆ ಮನಬಂದಂತೆ ಥಳಿಸಿದ್ದು, ಇಬ್ಬರ ನಡುವಿನ ಹೊಡೆದಾಟವನ್ನು ಬಿಡಿಸಬೇಕಾದ ಜನ ಅದೆಲ್ಲವನ್ನು ಮರೆತು ರೀಲ್ಸ್ ಮಾಡುತ್ತಾ ನಿಂತಿದ್ದಾರೆ. ಈ ವಿಡಿಯೋ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಈ ಘಟನೆ ಉತ್ತರ ಪ್ರದೇಶದ ಹರ್ದೋಯಿಯಲ್ಲಿ ನಡೆದಿದ್ದು, ‘ಘರ್ ಕಿ ಕಾಲೇಶ್’ ಎಂಬ ಸಾಮಾಜಿಕ ಜಾಲತಾಣ ಎಕ್ಸ್ ಬಳಕೆದಾರರು ಈ ವಿಡಿಯೋವನ್ನು ಅಪ್ಲೋಡ್ ಮಾಡಿದ್ದಾರೆ. ವಿಡಿಯೋದಲ್ಲಿ ಕಂಡು ಬರುವಂತೆ ಪತಿ ತನ್ನ ಪತ್ನಿಗೆ ಅಶ್ಲೀಲವಾಗಿ ಬಯ್ಯುತ್ತಾ ಥಳಿಸಲು ಆರಂಭಿಸಿದ್ದಾನೆ. ಇದಕ್ಕೆ ಪ್ರತಿರೋಧ ತೋರಲು ಆತನ ಪತ್ನಿ ಯತ್ನಿಸಿದರೂ ಸಹ ಯಾವುದೇ ಪ್ರಯೋಜನವಾಗಿಲ್ಲ.
ಯಾವ ಕಾರಣಕ್ಕೆ ಇಬ್ಬರ ನಡುವೆ ಜಗಳ ನಡೆದಿದೆ ಎಂಬುದು ತಿಳಿದು ಬಂದಿಲ್ಲವಾದರೂ ಸಹ ಪತಿ ಮಹಾಶಯ ತನ್ನ ಪತ್ನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾನೆ. ಸಾರ್ವಜನಿಕರ ಸಮ್ಮುಖದಲ್ಲೇ ಇಷ್ಟೆಲ್ಲಾ ಘಟನೆ ನಡೆಯುತ್ತಿದ್ದರೂ ಸಹ ಯಾರೊಬ್ಬರು ಮಹಿಳೆಯ ನೆರವಿಗೆ ಧಾವಿಸಿಲ್ಲ. ಬದಲಾಗಿ ತಮ್ಮ ಮೊಬೈಲ್ ನಲ್ಲಿ ಈ ದೃಶ್ಯವನ್ನು ಸೆರೆ ಹಿಡಿಯಲು ಮುಂದಾಗಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಮಹಿಳೆಯ ಪತಿ ಹಾಗೂ ಸಾರ್ವಜನಿಕರ ವರ್ತನೆಯನ್ನು ಖಂಡಿಸಿದ್ದಾರೆ.
https://twitter.com/gharkekalesh/status/1820342389556568336?ref_src=twsrc%5Etfw%7Ctwcamp%5Etweetembed%7Ctwterm%5E1820342389556568336%7Ctwgr%5E705fd023453492307d2e304859e693f121583006%7Ctwcon%5Es1_&ref_url=https%3A%2F%2Fm.dailyhunt.in%2Fnews%2Findia%2Fenglish%2Fdnpindia-epaper-dh32aa52fd1e564d7ab912b538d71eaab2%2Fviralvideoshockinghusbandbrutallyassaultswifeinfullpublicviewbystandersmakereelswatch-newsid-n625268024