ಹೈದರಾಬಾದ್: ಹಾಸ್ಟೆಲ್ ಗೆ ನುಗ್ಗಿ ವಿದ್ಯಾರ್ಥಿಗೆ ಥಳಿಸಿ ‘ಅಲ್ಲಾಹು ಅಕ್ಬರ್’ ಎಂದು ಕೂಗಲು ಒತ್ತಾಯಿಸಲಾಗಿದೆ. 20ಕ್ಕೂ ಹೆಚ್ಚು ವಿದ್ಯಾರ್ಥಿಗಳ ವಿರುದ್ಧ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
ಶಂಕರಪಲ್ಲಿ ಪೊಲೀಸ್ ಠಾಣೆಗೆ ವಿದ್ಯಾರ್ಥಿ ಹಿಮಾಂಕ್ ದೂರು ನೀಡಿದ್ದಾರೆ. ವಿದ್ಯಾರ್ಥಿಗೆ ಹಲ್ಲೆ ಮಾಡುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ತೆಲಂಗಾಣದ ರಂಗಾರೆಡ್ಡಿ ಜಿಲ್ಲೆ ಧೋಂತನಪಲ್ಲಿ ಐಬಿಎಸ್ ಕಾಲೇಜು ಹಾಸ್ಟೆಲ್ ನಲ್ಲಿ ಈ ಘಟನೆ ನಡೆದಿದೆ. ಎಲ್.ಎಲ್.ಬಿ. ಮೊದಲ ವರ್ಷದ ವಿದ್ಯಾರ್ಥಿ ಹಿಮಾಂಕ್ ಮೇಲೆ ಹಲ್ಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.
ಆಕ್ಷೇಪಾರ್ಹ ಕಾಮೆಂಟ್ ಮಾಡಿದ ಆರೋಪದ ಮೇಲೆ ವಿದ್ಯಾರ್ಥಿಗೆ ಆತನ ಹಿರಿಯರು ಥಳಿಸಿದ್ದಾರೆ. ವಿದ್ಯಾರ್ಥಿಗೆ ಥಳಿಸಿದ್ದಲ್ಲದೆ, ‘ಅಲ್ಲಾಹು ಅಕ್ಬರ್’ ಎಂದು ಕೂಗುವಂತೆ ಒತ್ತಾಯಿಸಿದ್ದಾರೆ.
ಘಟನೆಯ ಹಲವು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ತೆಲಂಗಾಣದ ಶಂಕರಪಲ್ಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನವೆಂಬರ್ 1 ರಂದು ಈ ಘಟನೆ ನಡೆದಿದೆ.
ವಿಡಿಯೊಗಳು ವೈರಲ್ ಆಗುತ್ತಿದ್ದಂತೆ ಜೂನಿಯರ್ ವಿದ್ಯಾರ್ಥಿ ಸೇರಿದಂತೆ ಎಲ್ಲಾ ವಿದ್ಯಾರ್ಥಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.