
ಇದೀಗ ಯುವತಿಯೊಬ್ಬರು ಗಾಳಿಯಲ್ಲಿ ಗುಂಡು ಹಾರಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಉತ್ತರ ಪ್ರದೇಶದ ಮುಜಾಫರ್ ನಗರದ ಕೊತ್ವಾಲಿ ಪ್ರದೇಶದ ಯುವತಿಯೊಬ್ಬರು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾಗ ಗುಂಡು ಹಾರಿಸಿದ್ದಾರೆ.
ರಾತ್ರಿ ವೇಳೆ ಕಿರಿದಾದ ರಸ್ತೆಯಲ್ಲಿ ಚಿತ್ರೀಕರಿಸಲಾದ ವಿಡಿಯೋದಲ್ಲಿ, ಯುವತಿ ಇಬ್ಬರು ವ್ಯಕ್ತಿಗಳ ಮಧ್ಯದಲ್ಲಿ ನಿಂತಿರುವುದನ್ನು ನೋಡಬಹುದು. ರಸ್ತೆಯು ನೀಲಿ ದೀಪಗಳಿಂದ ಮಂದವಾಗಿ ಬೆಳಗಿದ್ದು, ಹಾಡನ್ನು ಕೂಡ ಪ್ಲೇ ಮಾಡಲಾಗುತ್ತಿದೆ. ನಂತರ ಆಕೆ ತನ್ನ ಕೈಯನ್ನು ಎತ್ತಿ ಬಂದೂಕಿನಿಂದ ಗಾಳಿಯಲ್ಲಿ ಗುಂಡು ಹಾರಿಸಿದ್ದಾಳೆ.
ಸದ್ಯ, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ವ್ಯಾಪಕ ವಿರೋಧ ವ್ಯಕ್ತವಾಗಿದೆ. ಸಂಭ್ರಮಾಚರಣೆಯ ಸಮಯದಲ್ಲಿ ಗಾಳಿಯಲ್ಲಿ ಗುಂಡು ಹಾರಿಸುವುದರಿಂದ ಕೆಲವೊಮ್ಮೆ ಅಪಘಾತ ಸಂಭವಿಸುತ್ತವೆ. ಅನೇಕ ಸಂದರ್ಭದಲ್ಲಿ ಸಂಭ್ರಮಾಚರಣೆ ವೇಳೆ ಗುಂಡು ಹಾರಿಸಿದ ಪರಿಣಾಮ ಕೆಲವರು ಅಸುನೀಗಿದ, ಗಾಯಗೊಂಡ ಪ್ರಕರಣಗಳೂ ಸಂಭವಿಸಿವೆ.
ಇನ್ನು ಈ ವಿಡಿಯೋ ವೈರಲ್ ಆದ ನಂತರ, ಪೊಲೀಸರಿಗೆ ದೂರು ನೀಡಲಾಗಿದೆ. ಟ್ವಿಟ್ಟರ್ ಬಳಕೆದಾರರ ಟ್ವೀಟ್‌ಗೆ ಮುಜಫರ್‌ನಗರ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಮತ್ತು ಸಂಬಂಧಪಟ್ಟವರ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.