alex Certify ಹುಟ್ಟುಹಬ್ಬದ ಸಂಭ್ರಮ ವೇಳೆ ಯುವತಿಯಿಂದ ಫೈರಿಂಗ್: ವಿಡಿಯೋ ವೈರಲ್ ಬೆನ್ನಲ್ಲೆ ಎಫ್ಐಆರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹುಟ್ಟುಹಬ್ಬದ ಸಂಭ್ರಮ ವೇಳೆ ಯುವತಿಯಿಂದ ಫೈರಿಂಗ್: ವಿಡಿಯೋ ವೈರಲ್ ಬೆನ್ನಲ್ಲೆ ಎಫ್ಐಆರ್

Viral Video: UP Woman Fires Gunshots in Air to Celebrate Birthday; Case Filedಇತ್ತೀಚೆಗೆ ಉತ್ತರಪ್ರದೇಶದಲ್ಲಿ ವಿವಾಹ ಕಾರ್ಯಕ್ರಮವೊಂದರಲ್ಲಿ ವಧು-ವರ ಪಿಸ್ತೂಲ್ ನಿಂದ ಗುಂಡು ಹಾರಿಸಿದ ವಿಡಿಯೋ ವೈರಲ್ ಆಗಿತ್ತು. ತದನಂತರ ಬರ್ತ್ ಡೇ ಪಾರ್ಟಿಯಲ್ಲಿ ಯುವಕರ ಗುಂಪೊಂದು ಕೂಡ ಗುಂಡು ಹಾರಿಸಿದ್ದ ವಿಡಿಯೋ ಭಾರಿ ಸದ್ದು ಮಾಡಿತ್ತು. ಬಂದೂಕಿಗೆ ಲೈಸನ್ಸ್ ಹೊಂದಿದ್ದರೂ ಸಹ ಸಮಾರಂಭಗಳಲ್ಲಿ ಗುಂಡು ಹಾರಿಸುವುದು ಕಾನೂನು ಪ್ರಕಾರ ಅಕ್ಷಮ್ಯ ಅಪರಾಧವಾಗಿದೆ.

ಇದೀಗ ಯುವತಿಯೊಬ್ಬರು ಗಾಳಿಯಲ್ಲಿ ಗುಂಡು ಹಾರಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಉತ್ತರ ಪ್ರದೇಶದ ಮುಜಾಫರ್‌ ನಗರದ ಕೊತ್ವಾಲಿ ಪ್ರದೇಶದ ಯುವತಿಯೊಬ್ಬರು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾಗ ಗುಂಡು ಹಾರಿಸಿದ್ದಾರೆ.

ರಾತ್ರಿ ವೇಳೆ ಕಿರಿದಾದ ರಸ್ತೆಯಲ್ಲಿ ಚಿತ್ರೀಕರಿಸಲಾದ ವಿಡಿಯೋದಲ್ಲಿ, ಯುವತಿ ಇಬ್ಬರು ವ್ಯಕ್ತಿಗಳ ಮಧ್ಯದಲ್ಲಿ ನಿಂತಿರುವುದನ್ನು ನೋಡಬಹುದು. ರಸ್ತೆಯು ನೀಲಿ ದೀಪಗಳಿಂದ ಮಂದವಾಗಿ ಬೆಳಗಿದ್ದು, ಹಾಡನ್ನು ಕೂಡ ಪ್ಲೇ ಮಾಡಲಾಗುತ್ತಿದೆ. ನಂತರ ಆಕೆ ತನ್ನ ಕೈಯನ್ನು ಎತ್ತಿ ಬಂದೂಕಿನಿಂದ ಗಾಳಿಯಲ್ಲಿ ಗುಂಡು ಹಾರಿಸಿದ್ದಾಳೆ.

ಸದ್ಯ, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ವ್ಯಾಪಕ ವಿರೋಧ ವ್ಯಕ್ತವಾಗಿದೆ. ಸಂಭ್ರಮಾಚರಣೆಯ ಸಮಯದಲ್ಲಿ ಗಾಳಿಯಲ್ಲಿ ಗುಂಡು ಹಾರಿಸುವುದರಿಂದ ಕೆಲವೊಮ್ಮೆ ಅಪಘಾತ ಸಂಭವಿಸುತ್ತವೆ. ಅನೇಕ ಸಂದರ್ಭದಲ್ಲಿ ಸಂಭ್ರಮಾಚರಣೆ ವೇಳೆ ಗುಂಡು ಹಾರಿಸಿದ ಪರಿಣಾಮ ಕೆಲವರು ಅಸುನೀಗಿದ, ಗಾಯಗೊಂಡ ಪ್ರಕರಣಗಳೂ ಸಂಭವಿಸಿವೆ.

ಇನ್ನು ಈ ವಿಡಿಯೋ ವೈರಲ್ ಆದ ನಂತರ, ಪೊಲೀಸರಿಗೆ ದೂರು ನೀಡಲಾಗಿದೆ. ಟ್ವಿಟ್ಟರ್ ಬಳಕೆದಾರರ ಟ್ವೀಟ್‌ಗೆ ಮುಜಫರ್‌ನಗರ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಮತ್ತು ಸಂಬಂಧಪಟ್ಟವರ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...