ಆಂಟಿಗುವಾ: ಆಂಟಿಗುವಾದ ಸರ್ ವಿವಿಯನ್ ರಿಚರ್ಡ್ಸ್ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಟಿ20 ವಿಶ್ವಕಪ್ ಸೂಪರ್ 8ರ ಬಾಂಗ್ಲಾದೇಶ ಎದುರಿನ ಪಂದ್ಯದಲ್ಲಿ ಭಾರತದ ರನ್ ಮಷಿನ್ ವಿರಾಟ್ ಕೊಹ್ಲಿ ಹೊಸ ದಾಖಲೆ ಬರೆದಿದ್ದಾರೆ.
ಟಿ20 ಮತ್ತು ಏಕದಿನ ವಿಶ್ವಕಪ್ ಎರಡರಿಂದ 3000 ರನ್ ಗಳಿಸಿದ ವಿಶ್ವದ ಮೊದಲ ಆಟಗಾರ ಎಂಬ ಹೊಸ ದಾಖಲೆಯನ್ನು ವಿರಾಟ್ ಕೊಹ್ಲಿ ಬರೆದಿದ್ದಾರೆ. ಬಾಂಗ್ಲಾದೇಶ ಎದುರಿನ ಸೂಪರ್ 8ರ ಪಂದ್ಯದಲ್ಲಿ 37 ರನ್ ಗಳಿಸಿದ ಸಂದರ್ಭದಲ್ಲಿ ವಿರಾಟ್ ಕೊಹ್ಲಿ ಈ ಮೈಲುಗಲ್ಲು ಸ್ಥಾಪಿಸಿದ್ದಾರೆ.
ಅವರು 32 ಟಿ20 ವಿಶ್ವಕಪ್ ಪಂದ್ಯಗಳಲ್ಲಿ ಗರಿಷ್ಠ 89 ಸೇರಿ 1207 ರನ್ ಗಳಿಸಿದ್ದಾರೆ. 37 ಏಕದಿನ ವಿಶ್ವಕಪ್ ಪಂದ್ಯಗಳಲ್ಲಿ ಗರಿಷ್ಠ 117 ಸೇರಿದಂತೆ 1795 ರನ್ ಗಳಿಸಿದ್ದಾರೆ.