ಮೆಲ್ಬೋರ್ನ್ ನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ 4ನೇ ಟೆಸ್ಟ್ ಪಂದ್ಯದ ವೇಳೆ ಆಕ್ರಮಣಕಾರಿ ವರ್ತನೆ ತೋರಿದ ಹಿನ್ನೆಲೆಯಲ್ಲಿ ಟೀಂ ಇಂಡಿಯಾ ಆಟಗಾರ ವಿರಾಟ್ ಕೊಹ್ಲಿಗೆ ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ-ಐಸಿಸಿ ದಂಡ ವಿಧಿಸಿದೆ.
ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಬ್ಯಾಟಿಂಗ್ ಮಾಡುತ್ತಿದ್ದ ಆಶ್ಟ್ರೇಲಿಯಾ ಬ್ಯಾಟ್ಸಮನ್ ಸ್ಯಾಮ್ ಕೊನ್ ಸ್ಟಾಸ್ ಅವರನ್ನು ಭುಜದಿಂದ ಗುದ್ದಿ ಕೆಣಕ್ಕಿದ್ದರು. ಉದ್ದೇಶಪೂರ್ವಕವಾಗಿ ಕೊಹ್ಲಿ ಈ ವರ್ತನೆ ತೋರಿದಂತೆ ಕಂಡು ಬಂದ ಹಿನ್ನೆಲೆಯಲ್ಲಿ ಮ್ಯಾಚ್ ರೆಫರಿ ಅವರನ್ನು ಕರೆದು ವಿಚಾರಿಸಿದ್ದರು. ಈ ವೇಳೆ ಕೊಹ್ಲಿ ತಮ್ಮ ತಪ್ಪು ಒಪ್ಪಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ದಂಡ ವಿಧಿಸಲಾಗಿದೆ.
ಪಂದ್ಯದ ಶುಲ್ಕದ ಶೇ.20ರಷ್ಟು ದಂಡ ವಿಧಿಸಲಾಗಿದ್ದು, ಅನುಚಿತ ವರ್ತನೆಗಾಗಿ ಒಂದು ಡಿಮೆರಿಟ್ ಪಾಂಯಿಂಟ್ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ವಿರಾಟ್ ಕೊಹ್ಲಿ ಮುಂಬರುವ ಪಂದ್ಯಗಳಲ್ಲಿ ಬಹಳ ಶಿಸ್ತಿನಿಂದ ಆಡಬೇಕಾದ ಅನಿವಾರ್ಯತೆ ಎದುರಾಗಿದೆ.