ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಐಸಿಸಿ ಟೆಸ್ಟ್ ಬ್ಯಾಟಿಂಗ್ ಶ್ರೇಯಾಂಕದಲ್ಲಿ ನಾಲ್ಕನೇ ಸ್ಥಾನಕ್ಕೇರಿದ್ದಾರೆ. ಆಸ್ಟ್ರೇಲಿಯಾದ ಬ್ಯಾಟ್ಸ್ ಮನ್ ಸ್ಟೀವ್ ಸ್ಮಿತ್ ಮತ್ತೆ ಅಗ್ರ ಸ್ಥಾನ ಪಡೆದಿದ್ದಾರೆ. ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ನಲ್ಲಿ ಭಾರತವನ್ನು ಮುನ್ನಡೆಸಲಿರುವ ಕೊಹ್ಲಿ 814 ಅಂಕಗಳನ್ನು ಹೊಂದಿದ್ದಾರೆ. ಅಗ್ರ 10ರ ಪಟ್ಟಿಯಲ್ಲಿ ರಿಷಭ್ ಪಂತ್ 747 ಪಾಯಿಂಟ್ ಪಡೆದಿದ್ದರೆ ಸ್ಟಾರ್ ಓಪನರ್ ರೋಹಿತ್ ಶರ್ಮಾ 747 ಪಾಯಿಂಟ್ ನಲ್ಲಿದ್ದಾರೆ.
ಕಳೆದ ವರ್ಷ ಬಾಕ್ಸಿಂಗ್ ಡೇ ಟೆಸ್ಟ್ ನಂತರ ಸ್ಟೀವ್ ಸ್ಮಿತ್ ಮೊದಲ ಬಾರಿಗೆ ಅಗ್ರ ಸ್ಥಾನ ಪಡೆದಿದ್ದಾರೆ. ನ್ಯೂಜಿಲೆಂಡ್ನ ಕೇನ್ ವಿಲಿಯಮ್ಸನ್ ಗಾಯದಿಂದಾಗಿ ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯವನ್ನು ತಪ್ಪಿಸಿಕೊಂಡರು. ಹಾಗಾಗಿ ಸ್ಮಿತ್ 891 ಅಂಕದೊಂದಿಗೆ ಮೊದಲ ಸ್ಥಾನಕ್ಕೇರಿದ್ದು, ಕೇನ್ ವಿಲಿಯಮ್ಸನ್ ಎರಡನೇ ಸ್ಥಾನಕ್ಕಿಳಿದಿದ್ದಾರೆ.
ಬೌಲಿಂಗ್ ವಿಭಾಗದಲ್ಲಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಎರಡನೇ ಸ್ಥಾನದಲ್ಲಿದ್ದಾರೆ. ಆಸ್ಟ್ರೇಲಿಯಾದ ವೇಗಿ ಪ್ಯಾಟ್ ಕಮ್ಮಿನ್ಸ್ 908 ಅಂಕದೊಂದಿಗೆ ಮೊದಲ ಸ್ಥಾನದಲ್ಲಿದ್ದಾರೆ. ಅಗ್ರ 10 ಬೌಲರ್ ಗಳ ಪಟ್ಟಿಯಲ್ಲಿ ಅಶ್ವಿನ್ ಮಾತ್ರ ಸ್ಥಾನ ಪಡೆದಿದ್ದಾರೆ.