ಇಂಗ್ಲೆಂಡ್ ವಿರುದ್ಧ ನಾಳೆಯಿಂದ ಟೀಂ ಇಂಡಿಯಾ ನಾಲ್ಕನೇ ಟೆಸ್ಟ್ ಪಂದ್ಯವನ್ನಾಡಲಿದೆ. ಪಂದ್ಯಕ್ಕೂ ಮುನ್ನವೇ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಗೆ ನಿರಾಸೆಯಾಗಿದೆ. ಸ್ಟಾರ್ ಬ್ಯಾಟ್ಸ್ಮನ್ ರೋಹಿತ್ ಶರ್ಮಾಗೆ ಖುಷಿ ಸುದ್ದಿ ಸಿಕ್ಕಿದೆ.
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿನ ಕಳಪೆ ಪ್ರದರ್ಶನ ನೀಡಿದ ಕೊಹ್ಲಿ. ದೊಡ್ಡ ನಷ್ಟ ಅನುಭವಿಸಿದ್ದಾರೆ. ಐಸಿಸಿ ಟೆಸ್ಟ್ ರ್ಯಾಂಕಿಂಗ್ ನ ಬ್ಯಾಟಿಂಗ್ ವಿಭಾಗದಲ್ಲಿ ಕೊಹ್ಲಿ 6 ನೇ ಸ್ಥಾನಕ್ಕೆ ಕುಸಿದಿದ್ದಾರೆ.
ಖುಷಿ ಸುದ್ದಿಯೆಂದ್ರೆ, ರೋಹಿತ್ ಶರ್ಮಾ ಟೆಸ್ಟ್ ಶ್ರೇಯಾಂಕದಲ್ಲಿ ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿದ್ದಾರೆ. ಟೆಸ್ಟ್ ರ್ಯಾಂಕಿಂಗ್ ನಲ್ಲಿ ಶರ್ಮಾ 5ನೇ ಸ್ಥಾನಕ್ಕೇರಿದ್ದಾರೆ. ಹಿಟ್‌ಮ್ಯಾನ್ ರೋಹಿತ್ ಶರ್ಮಾ ಉತ್ತಮ ಫಾರ್ಮ್‌ನಲ್ಲಿದ್ದಾರೆ. ರೋಹಿತ್ ಶರ್ಮಾ, ಇಂಗ್ಲೆಂಡ್ ಟೆಸ್ಟ್ ಸರಣಿಯಲ್ಲಿ ಈವರೆಗೆ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದ್ದಾರೆ. 2 ಅರ್ಧ ಶತಕಗಳ ನೆರವಿನಿಂದ 230 ರನ್ ಗಳಿಸಿದ್ದಾರೆ.
ಐಸಿಸಿ ಟೆಸ್ಟ್ ರ್ಯಾಂಕಿಂಗ್ ಪಟ್ಟಿಯಲ್ಲಿ ಇಂಗ್ಲೆಂಡ್ ನಾಯಕ ಜೋ ರೂಟ್ 916 ರೇಟಿಂಗ್ ಪಾಯಿಂಟ್‌ಗಳೊಂದಿಗೆ ನಂಬರ್ ಒನ್ ಸ್ಥಾನದಲ್ಲಿದ್ದಾರೆ. ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ ಎರಡನೇ ಸ್ಥಾನದಲ್ಲಿದ್ದಾರೆ. ಆಸ್ಟ್ರೇಲಿಯಾದ ಬ್ಯಾಟ್ಸ್ ಮನ್ ಸ್ಟೀವ್ ಸ್ಮಿತ್ ಮೂರನೇ ಮತ್ತು ಮರ್ನಾಸ್ ಲ್ಯಾಬುಶೈನ್ ನಾಲ್ಕನೇ ಸ್ಥಾನದಲ್ಲಿದ್ದಾರೆ.
ಭಾರತ-ಇಂಗ್ಲೆಂಡ್ ಟೆಸ್ಟ್ ಪಂದ್ಯದಲ್ಲಿ ರೂಟ್ ಉತ್ತಮ ಪ್ರದರ್ಶನ ನೀಡಿದ್ದಾರೆ. ಸರಣಿ ಆರಂಭಕ್ಕೂ ಮುನ್ನ ರೂಟ್ ಐದನೇ ಸ್ಥಾನದಲ್ಲಿದ್ದರು.