ನವದೆಹಲಿ : ಮುಂಬರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಗೆ ಮುಂಚಿತವಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಗೆ ಸೇರಲು ಸ್ಟಾರ್ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ಭಾರತಕ್ಕೆ ಆಗಮಿಸಿದ್ದಾರೆ.
ಅವರ ತಂಡದ ಆಟಗಾರರು ಈಗಾಗಲೇ ಈ ವಾರದ ಆರಂಭದಲ್ಲಿ ಬೆಂಗಳೂರಿನಲ್ಲಿ ನಡೆದ ಅಭ್ಯಾಸ ಪಂದ್ಯದಲ್ಲಿ ಭಾಗವಹಿಸಿದ್ದರೂ ಕೊಹ್ಲಿ ಕಾಣಿಸಿಕೊಂಡಿರಲಿಲ್ಲ. ಇದೀಗ ಕೊಹ್ಲಿ ವಿದೇಶದಿಂದ ಭಾರತಕ್ಕೆ ಬಂದಿಳಿದ್ದು, ವಿಡಿಯೋ ವೈರಲ್ ಆಗಿದೆ. ಇಲ್ಲಿವರೆಗೆ ಕೊಹ್ಲಿ ತಮ್ಮ ಕುಟುಂಬದೊಂದಿಗೆ ಯುನೈಟೆಡ್ ಕಿಂಗ್ಡಮ್ ನಲ್ಲಿದ್ದರು ಎಂದು ತಿಳಿದುಬಂದಿದೆ.
ಟೀಂ ಇಂಡಿಯಾ ಆಟಗಾರ ವಿರಾಟ್ ಕೊಹ್ಲಿ, ನಟಿ ಅನುಷ್ಕಾ ಶರ್ಮ ದಂಪತಿಗೆ ಗಂಡು ಮಗು ಜನಿಸಿದೆ. ಕ್ರಿಕೆಟಿಗ ವಿರಾಟ್ ಕೊಹ್ಲಿ ಗಂಡು ಮಗುವಿನ ತಂದೆಯಾಗಿದ್ದಾರೆ.ಫೆಬ್ರವರಿ 15ರಂದು ಅನುಷ್ಕಾ ಶರ್ಮಾ ಗಂಡು ಮಗುವಿಗೆ ಜನ್ಮ ನೀಡಿದ್ದು, ಐದು ದಿನಗಳ ನಂತರ ದಂಪತಿ ಮಾಹಿತಿ ಹಂಚಿಕೊಂಡಿದ್ದರು. ಪುತ್ರನಿಗೆ ಅಕಾಯ್ ಎಂದು ನಾಮಕರಣ ಮಾಡಲಾಗಿದೆ. ಈ ಹಿನ್ನೆಲೆ ತಮ್ಮ ಕುಟುಂಬದ ಜೊತೆ ಕಾಲ ಕಳೆಯಲು ವಿದೇಶದಲ್ಲಿದ್ದ ಕೊಹ್ಲಿ ಇದೀಗ ಭಾರತಕ್ಕೆ ಬಂದಿಳಿದಿದ್ದಾರೆ.