
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ಜೊತೆಗೆ ‘ಯಾವಾಗಲೂ ಇರುತ್ತೇನೆ’ ಎಂದು ಅಭಿಮಾನಿಗಳಿಗೆ ವಿರಾಟ್ ಕೊಹ್ಲಿ ಭರವಸೆ ನೀಡಿದ್ದಾರೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳಿಗೆ ಕೃತಜ್ಞತೆ ಸಲ್ಲಿಸಿರುವ ವಿರಾಟ್ ಕೊಹ್ಲಿ, ಆರ್‌ಸಿಬಿಯೊಂದಿಗೆ ಸದಾ ಇರುವುದಾಗಿ ಭರವಸೆ ನೀಡಿದ್ದಾರೆ. ಮಹಿಳಾ ತಂಡದ ಸಾಧನೆಯನ್ನು ಸರಿಗಟ್ಟಲು ಮತ್ತು ಮತ್ತೊಂದು ಟ್ರೋಫಿ ಪಡೆಯಲು ಪ್ರಯತ್ನಿಸುವುದಾಗಿ ಸ್ಟಾರ್ ಬ್ಯಾಟರ್ ಹೇಳಿದ್ದಾರೆ.