ವಿಶಾಖಪಟ್ಟಣಂ: ಮದುವೆ ಶಾಸ್ತ್ರಗಳು ನಡೆಯುತ್ತಿದ್ದ ವೇಳೆ ಪ್ರಜ್ಞೆ ಕಳೆದುಕೊಂಡ ವಧು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ವೇಳೆ ಸಾವನ್ನಪ್ಪಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
ಮೃತ ವಧುವನ್ನು ಸೃಜನ ಎಂದು ಗುರುತಿಸಲಾಗಿದೆ. ಈ ದುರಂತ ಘಟನೆ ವಿಶಾಖಪಟ್ಟಣಂನ ಮಧುರವಾಡದ ಫಂಕ್ಷನ್ ಹಾಲ್ನಲ್ಲಿ ನಡೆದಿದ್ದು, ಸಾವಿಗೆ ಕಾರಣ ಏನು ಎಂಬುದು ತಿಳಿದು ಬಂದಿಲ್ಲ. ಆದರೆ ಪೊಲೀಸರು ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ವಿಶಾಖಪಟ್ಟಣಂನ ಮಧುರವಾಡದ ಫಂಕ್ಷನ್ ಹಾಲ್ನಲ್ಲಿ ಮದುವೆಯ ವಿಧಿ ವಿಧಾನಗಳು ನಡೆಯುತ್ತಿದ್ದ ವೇಳೆ ವಧು ಸೃಜನ ಪ್ರಜ್ಞೆ ತಪ್ಪಿ ಬಿದ್ದಿದ್ದಾಳೆ. ಕುಟುಂಬಸ್ಥರು, ಸಂಬಂಧಿಕರು ಖಾಸಗಿ ಆಸ್ಪತ್ರೆಗೆ ಕರೆದೊಯ್ದರು ಪ್ರಯೋಜನವಾಗದೆ ಮೃತಪಟ್ಟಿದ್ದಾರೆ. ಮೇಲ್ನೋಟಕ್ಕೆ ವಧು ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬಂತೆ ತೋರುತ್ತಿದೆ ಎಂದ ಪೊಲೀಸರು ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿಕೊಂಡಿದ್ದು, ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿಕೊಡಲಾಗಿದೆ ಎಂದು ಹೇಳಿದ್ದಾರೆ.