
ಮಂಡ್ಯ: ನಟ ಚೇತನ್ ವಿರುದ್ಧ ಪೇಜಾವರ ಸ್ವಾಮೀಜಿ ಅಸಮಾಧಾನ ವ್ಯಕ್ತಪಡಿಸಿದ್ದು, ಚೀಪ್ ಪಬ್ಲಿಸಿಟಿಗೋಸ್ಕರ ಈ ರೀತಿ ಮಾತನಾಡುತ್ತಿದ್ದಾರೆ ಎಂದು ಹೇಳಿದ್ದಾರೆ.
ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಅವರವರ ನಂಬಿಕೆ ಆಚರಣೆಗಳನ್ನು ವಿರೋಧಿಸುವುದು ತಪ್ಪು. ಯಾವ ನೆಲೆಯಲ್ಲಿ ಚೇತನ್ ಮಾತನಾಡಿದ್ದರೋ ನನಗೆ ಅರ್ಥವಾಗುತ್ತಿಲ್ಲ. ಹಿಂದುತ್ವ ಹಾಗೂ ಬ್ರಾಹ್ಮಣತ್ವ ಬೇರೆ ಅಲ್ಲ. ಹಿಂದುತ್ವ ವಿಶಾಲವಾದದ್ದು, ಅದರೊಳಗೆ ಬ್ರಾಹ್ಮಣತ್ವವೂ ಬರುತ್ತದೆ. ಚೇತನ್ ಹೇಳಿಕೆಗೆ ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.