alex Certify ತೆಲಂಗಾಣದ ಎನ್ ಕೌಂಟರ್ ಸ್ಪೆಷಲಿಸ್ಟ್ ವಿಶ್ವನಾಥ್ ಸಜ್ಜನರ್ ಮಾದರಿ ಕಾರ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತೆಲಂಗಾಣದ ಎನ್ ಕೌಂಟರ್ ಸ್ಪೆಷಲಿಸ್ಟ್ ವಿಶ್ವನಾಥ್ ಸಜ್ಜನರ್ ಮಾದರಿ ಕಾರ್ಯ

ಹೈದರಾಬಾದ್ ನಲ್ಲಿ 2019 ರಲ್ಲಿ ಪಶುವೈದ್ಯೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಬೆಂಕಿ ಹಚ್ಚಿ ಸಜೀವ ದಹನ ಮಾಡಿದ್ದ ದುಷ್ಕರ್ಮಿಗಳನ್ನು ಎನ್ ಕೌಂಟರ್ ಮಾಡಿದ್ದ ಹುಬ್ಬಳ್ಳಿ ಮೂಲದ ಪೊಲೀಸ್ ಅಧಿಕಾರಿ ವಿಶ್ವನಾಥ್ ಸಜ್ಜನರ್ ಅವರು ಕೋಟ್ಯಂತರ ರೂಪಾಯಿ ಮೌಲ್ಯದ ಔಷಧಿ, ಆರೋಗ್ಯ ಕಿಟ್ ಗಳನ್ನು ದೇಣಿಗೆ ನೀಡಿದ್ದಾರೆ.

ತೆಲಂಗಾಣದ ಸೈಬರಾಬಾದ್ ನಲ್ಲಿ ಪೊಲೀಸ್ ಆಯುಕ್ತರಾಗಿರುವ ವಿಶ್ವನಾಥ್ ಸಜ್ಜನರ್ ಹೈದರಾಬಾದ್ ನ ದಾನಿಗಳ ನೆರವಿನಿಂದ ಕರ್ನಾಟಕದ ವಿವಿಧ ಆಸ್ಪತ್ರೆಗಳಿಗೆ 1.5 ಕೋಟಿ ರೂಪಾಯಿ ಮೌಲ್ಯದ ಔಷಧ ಸಾಮಗ್ರಿ, ಆರೋಗ್ಯ ಕಿಟ್ ಗಳನ್ನು ನೀಡಿದ್ದಾರೆ.

ಧಾರವಾಡ ಜಿಲ್ಲಾಸ್ಪತ್ರೆ, ಹುಬ್ಬಳ್ಳಿಯ ಕಿಮ್ಸ್, ಹಾವೇರಿ ಆಸ್ಪತ್ರೆ ಮೊದಲಾದ ಕಡೆಗಳಲ್ಲಿ ವೈದ್ಯಕೀಯ ಸಾಮಗ್ರಿಗಳನ್ನು ವಿತರಿಸಲಾಗಿದೆ. ಗದಗ ಜಿಲ್ಲಾಡಳಿತಕ್ಕೆ 40 ಲಕ್ಷ ರೂಪಾಯಿ ಮೌಲ್ಯದ ಔಷಧ ಮತ್ತು ಇತರ ಸಾಮಗ್ರಿ ಕೊಡಲಾಗಿದೆ. ನವಲಗುಂದ, ಸವದತ್ತಿಯಲ್ಲಿಯೂ ಅವರು ಲಕ್ಷಾಂತರ ರೂಪಾಯಿ ಮೌಲ್ಯದ ಔಷಧ, ವೈದ್ಯಕೀಯ ಸಾಮಗ್ರಿಗಳ ವಿತರಣೆಗೆ ವ್ಯವಸ್ಥೆ ಮಾಡಿದ್ದಾರೆ.

ಹುಬ್ಬಳ್ಳಿ ಮಲ್ಟಿಸ್ಪೆಷಲಿಟಿ ಕ್ಲಿನಿಕ್ ನ ಡಾ. ಮಲ್ಲಿಕಾರ್ಜುನ ಸಜ್ಜನರ ಅವರು, ಸಹೋದರ ವಿಶ್ವನಾಥ್ ಸಹಕಾರದಿಂದ ರಾಜ್ಯದ ವಿವಿಧ ಆಸ್ಪತ್ರೆಗಳಿಗೆ ಕೊರೋನಾ ನಿಯಂತ್ರಣಕ್ಕೆ ಔಷಧಿ ಸಾಮಗ್ರಿ, ವೈದ್ಯಕೀಯ ಸಾಮಗ್ರಿ ವಿತರಿಸಿದ್ದು ಬಡರೋಗಿಗಳಿಗೆ ಅನುಕೂಲವಾಗಲಿದೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...