ಬೆಂಗಳೂರು: ನೂತನ ಮುಖ್ಯಮಂತ್ರಿ ಅಧಿಕಾರ ವಹಿಸಿಕೊಂಡ ನಂತರ ಸಂಪುಟ ರಚನೆ ಪ್ರಕ್ರಿಯೆಗಳು ಕೂಡ ಆರಂಭವಾಗಿದೆ. ದೆಹಲಿಯಲ್ಲಿರುವ ಸಿಎಂ ಬಸವರಾಜ ಬೊಮ್ಮಾಯಿ ವರಿಷ್ಠರ ಗ್ರೀನ್ ಸಿಗ್ನಲ್ ಪಡೆದು ಸಂಪುಟ ವಿಸ್ತರಣೆ ಮಾಡಲಿದ್ದಾರೆ.
ವಿಧಾನಸಭೆ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಸಕ್ರಿಯ ರಾಜಕಾರಣಕ್ಕೆ ಮರಳುವ ಸಾಧ್ಯತೆ ಇದೆ. ಅವರು ಸಂಪುಟಕ್ಕೆ ಸೇರ್ಪಡೆಯಾಗಬಹುದು ಎಂಬ ಮಾತುಗಳು ಬಿಜೆಪಿ ವಲಯದಿಂದ ಕೇಳಿಬರುತ್ತಿವೆ. ಮುಖ್ಯಮಂತ್ರಿ ಸ್ಥಾನಕ್ಕೆ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಹೆಸರು ಕೂಡ ಕೇಳಿಬಂದಿತ್ತು. ಶುಕ್ರವಾರ ಹಲವು ಮುಖಂಡರು ಕಾಗೇರಿ ಯವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ್ದಾರೆ. ಸಂಪುಟಕ್ಕೆ ಸೇರಲು ಸಲಹೆ ನೀಡಿದ್ದಾರೆ ಎನ್ನಲಾಗಿದೆ.
ಹಿಂದೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾಗಿ ವಿಶ್ವೇಶ್ವರ ಹೆಗಡೆ ಕಾಗೇರಿ ಉತ್ತಮವಾಗಿ ಕಾರ್ಯ ನಿರ್ವಹಿಸಿದ್ದಾರೆ. ಅವರು ಮತ್ತೆ ಸಂಪುಟಕ್ಕೆ ಸೇರ್ಪಡೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.