alex Certify VISL ಪುನರಾರಂಭದ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್; ಕಾರ್ಖಾನೆ ಮುಚ್ಚುವ ನಿರ್ಧಾರವನ್ನು ಅಧಿಕೃತವಾಗಿ ಪ್ರಕಟಿಸಿದ ಕೇಂದ್ರ ಸರ್ಕಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

VISL ಪುನರಾರಂಭದ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್; ಕಾರ್ಖಾನೆ ಮುಚ್ಚುವ ನಿರ್ಧಾರವನ್ನು ಅಧಿಕೃತವಾಗಿ ಪ್ರಕಟಿಸಿದ ಕೇಂದ್ರ ಸರ್ಕಾರ

ಕರ್ನಾಟಕದ ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿರುವ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯನ್ನು ಮುಚ್ಚಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು ಇದನ್ನು ಈಗ ಅಧಿಕೃತವಾಗಿ ಪ್ರಕಟಿಸಲಾಗಿದೆ. ಹೀಗಾಗಿ ಕಾರ್ಖಾನೆ ಪುನರಾರಂಭವಾಗಬಹುದು ಎಂಬ ನಿರೀಕ್ಷೆಯಲ್ಲಿದ್ದವರ ಕನಸು ನುಚ್ಚುನೂರಾಗಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಹಲವು ನಾಯಕರು, ವಿಐಎಸ್ಎಲ್ ಪುನರಾರಂಭಿಸಲು ಕೇಂದ್ರ ಸರ್ಕಾರದ ಜೊತೆ ಮಾತುಕತೆ ನಡೆಸಲಾಗುತ್ತದೆ ಎಂದು ಹೇಳಿದ್ದ ಹಿನ್ನೆಲೆಯಲ್ಲಿ ಒಂದಷ್ಟು ಆಶಾ ಭಾವನೆ ಮೂಡಿತ್ತು. ಆದರೆ ಇದೀಗ ಕೇಂದ್ರ ಸರ್ಕಾರವೇ ಕಾರ್ಖಾನೆ ಮುಚ್ಚುವ ತನ್ನ ನಿರ್ಧಾರವನ್ನು ಸಂಸತ್ತಿನಲ್ಲಿ ಪ್ರಕಟಿಸಿದೆ.

105 ವರ್ಷಗಳ ಹಿಂದೆ ಸರ್ ಎಂ ವಿಶ್ವೇಶ್ವರಯ್ಯ ಅವರ ಸಲಹೆ ಮೇರೆಗೆ ಮೈಸೂರಿನ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಈ ಕಾರ್ಖಾನೆಯನ್ನು ಸ್ಥಾಪಿಸಿದ್ದು, ಒಂದು ಕಾಲದಲ್ಲಿ 12 ಸಾವಿರ ಮಂದಿಗೆ ಕಾರ್ಖಾನೆ ಉದ್ಯೋಗಾವಕಾಶ ನೀಡಿತ್ತು. ಬಳಿಕ ವಿಐಎಸ್ಎಲ್ ನಷ್ಟದ ಹಾದಿ ಹಿಡಿದಿದ್ದು, ಹೀಗಾಗಿ ಇದನ್ನು ಖಾಸಗೀಕರಣಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿತ್ತು. ಆದರೆ ಖರೀದಿಗೆ ಯಾರೂ ಮುಂದೆ ಬಾರದ ಕಾರಣ ಈಗ ಕಾರ್ಖಾನೆಯನ್ನು ಮುಚ್ಚಲಾಗುತ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...