alex Certify ಹೊಟ್ಟೆನೋವು ಎಂದ ಮಗಳನ್ನು ಆಸ್ಪತ್ರೆಗೆ ಕರೆದುಕೊಂಡು ಹೋದ ತಾಯಿಗೆ ಬಿಗ್ ಶಾಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೊಟ್ಟೆನೋವು ಎಂದ ಮಗಳನ್ನು ಆಸ್ಪತ್ರೆಗೆ ಕರೆದುಕೊಂಡು ಹೋದ ತಾಯಿಗೆ ಬಿಗ್ ಶಾಕ್

ಹೈದರಾಬಾದ್: 13 ವರ್ಷದ ಬಾಲಕಿ ಐದು ತಿಂಗಳ ಗರ್ಭಿಣಿಯಾಗಿದ್ದು, ಆಕೆಯ ಮೇಲೆ ನಿರಂತರ ಅತ್ಯಾಚಾರ ಎಸಗಿದ್ದ ಸೋದರ ಮಾವನಾದ ದೃಷ್ಟಿಹೀನ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ತೆಲಂಗಾಣದ ಜಗದ್ ಗಿರಿಗುಟ್ಟ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ. ಮೂರು ದಿನಗಳ ಹಿಂದೆ 13 ವರ್ಷದ ಬಾಲಕಿಗೆ ಹೊಟ್ಟೆ ನೋವು ಕಾಣಿಸಿಕೊಂಡಿದ್ದು, ಆಕೆಯ ಕುಟುಂಬದವರು ಚಿಕಿತ್ಸೆಗಾಗಿ ವೈದ್ಯರ ಬಳಿಗೆ ಕರೆದುಕೊಂಡು ಹೋಗಿದ್ದಾರೆ.

ವೈದ್ಯಕೀಯ ಪರೀಕ್ಷೆಯಲ್ಲಿ ಬಾಲಕಿ 5 ತಿಂಗಳ ಗರ್ಭಿಣಿಯಾಗಿರುವುದು ತಿಳಿದುಬಂದಿದೆ. ದೃಷ್ಟಿಹೀನ ಆಗಿರುವ ಆಕೆಯ ಮಾವ ಆರು ತಿಂಗಳಿನಿಂದ ಅನೇಕ ಬಾರಿ ಅತ್ಯಾಚಾರ ಎಸಗಿದ್ದಾನೆ ಎಂದು ಅಪ್ರಾಪ್ತ ಬಾಲಕಿ ತನ್ನ ತಾಯಿಗೆ ತಿಳಿಸಿದ್ದಾಳೆ.

ಆಘಾತಕ್ಕೆ ಒಳಗಾದ ಬಾಲಕಿಯ ಪೋಷಕರು ನಂತರದಲ್ಲಿ ಜಗದ್ ಗಿರಿಗುಟ್ಟ ಪೊಲೀಸರಿಗೆ ದೂರು ನೀಡಿದ್ದಾರೆ. ಐಪಿಸಿ ಮತ್ತು ಪೋಕ್ಸೋ ಕಾಯ್ದೆ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಭಾನುವಾರ ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...