alex Certify GOOD NEWS : ಅವಿವಾಹಿತ ಯುವಕರಿಗೆ ‘ವಿವಾಹ ಭಾಗ್ಯ’ ; ರಾಜ್ಯ ಸರ್ಕಾರದಿಂದ ʼಜೀವನ ಸಂಗಮʼ ಪೋರ್ಟಲ್ ಆರಂಭ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS : ಅವಿವಾಹಿತ ಯುವಕರಿಗೆ ‘ವಿವಾಹ ಭಾಗ್ಯ’ ; ರಾಜ್ಯ ಸರ್ಕಾರದಿಂದ ʼಜೀವನ ಸಂಗಮʼ ಪೋರ್ಟಲ್ ಆರಂಭ..!

ಉತ್ತರ ಕನ್ನಡ : ಅವಿವಾಹಿತ ಯುವಕರಿಗೆ ‘ವಿವಾಹ ಭಾಗ್ಯ’ ಕಲ್ಪಿಸಲು ಜಿಲ್ಲಾಡಳಿತ ʼಜೀವನ ಸಂಗಮʼ ಪೋರ್ಟಲ್ ಓಪನ್ ಮಾಡಿದ್ದು, ಆಸಕ್ತರು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.

ಜೀವನ ಸಂಗಮʼ ಎಂಬ ಪೋರ್ಟಲ್ ಆರಂಭಿಸಿರುವ ಉತ್ತರ ಕನ್ನಡ ಜಿಲ್ಲಾಡಳಿತ ವಿನೂತನ ಪ್ರಯೋಗ ಕೈಗೊಂಡಿದೆ. ಜಿಲ್ಲೆಯಲ್ಲಿನ ಅವಿವಾಹಿತ ರೈತರು, ವಿಕಲಚೇತನರು, ವಿಧವೆಯರಿಗೆ ಸೂಕ್ತ ಸಂಗಾತಿ ಆರಿಸಲು ಹಾಗೂ ಹೆಚ್ಐವಿ ಪೀಡಿತ ವ್ಯಕ್ತಿಗಳಿಗೆ ಅದೇ ಸಮುದಾಯದ ವ್ಯಕ್ತಿಯ ನಡುವೆ ವೈವಾಹಿಕ ಸಂಬಂಧವನ್ನು ಬೆಸೆದು ಅವರು ವಿವಾಹವಾಗಲು ವೇದಿಕೆಯನ್ನು ಕಲ್ಪಿಸಿಕೊಟ್ಟಿದೆ.

ಈ ಪೋರ್ಟಲ್ ಬಳಕೆದಾರರ ವೈಯಕ್ತಿಕ ಮಾಹಿತಿಯನ್ನು ಸಂರಕ್ಷಿಸಲು ಸಂಪೂರ್ಣ ಬದ್ಧವಾಗಿದ್ದು, ಎಲ್ಲಾ ಡೇಟಾವನ್ನು ಗೌಪ್ಯವಾಗಿ ಇರಿಸಿ, ವಿವಾಹ ಹೊಂದಾಣಿಕೆಯ ಉದ್ದೇಶಕ್ಕಾಗಿ ಮಾತ್ರ ಮಾಹಿತಿಯನ್ನು ಬಳಸಲಾಗುತ್ತದೆ. ಉತ್ತರ ಕನ್ನಡ ಜಿಲ್ಲೆಯ ಸ್ಥಳೀಯ ಅರ್ಹ ಯುವಕ ಯುವತಿಯರಿಗೆ ಮಾತ್ರ ಈ ವಿವಾಹ ನೋಂದಣಿ ವೇದಿಕೆ ಒದಗಿಸಲಿದ್ದು, ಜಿಲ್ಲೆಯ ನಿವಾಸಿಗಳಿಗೆ ಮಾತ್ರ ಇದರ ನೆರವು ದೊರೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...