ಆರೋಪಿಯೊಬ್ಬನಿಗೆ ಜಾಮೀನು ನೀಡಿರುವ ಹೈಕೋರ್ಟ್ ನ್ಯಾಯಮೂರ್ತಿಗಳ ವಿರುದ್ಧ ಮಾತನಾಡಿ ನ್ಯಾಯಾಂಗ ನಿಂದನೆ ಮೊಕದ್ದಮೆ ಎದುರಿಸುತ್ತಿರುವ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಇಂದು ದೆಹಲಿ ಕೋರ್ಟ್ ಮುಂದೆ ವಕೀಲರ ಮೂಲಕ ಬೇಷರತ್ ಕ್ಷಮೆ ಯಾಚಿಸಿದ್ದಾರೆ.
2018 ರ ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಸಾಮಾಜಿಕ ಕಾರ್ಯಕರ್ತ ಗೌತಮ್ ನವಲಖ ಅವರಿಗೆ ಈ ಹಿಂದೆ ಜಾಮೀನು ನೀಡಲಾಗಿತ್ತು. ಅಂದಿನ ನ್ಯಾಯಮೂರ್ತಿಗಳಾದ ಎಸ್. ಮುರಳೀಧರ್ ಅವರ ಮೇಲೆ ಪಕ್ಷಪಾತದ ಆರೋಪ ಹೊರಿಸುವ ರೀತಿಯಲ್ಲಿ ವಿವೇಕ್ ಅಗ್ನಿಹೋತ್ರಿ ಟ್ವೀಟ್ ಮಾಡಿದ್ದರು. ಈ ಸಂಬಂಧವಾಗಿ ನ್ಯಾಯಾಲಯವು ನ್ಯಾಯಾಂಗ ನಿಂದನೆ ಕೇಸ್ ದಾಖಲಿಸಿಕೊಂಡಿತ್ತು.
ಇದಾಗುತ್ತಿದ್ದಂತೆಯೇ ಟ್ವಿಟರ್ ಅನ್ನು ಅಗ್ನಿಹೋತ್ರಿ ಡಿಲೀಟ್ ಮಾಡಿದ್ದರು. ಈ ಬಗ್ಗೆ ಅವರ ಪರ ವಕೀಲರು ಕೋರ್ಟ್ಗೆ ತಿಳಿಸಿದ್ದರೂ ಕೋರ್ಟ್ ಇದನ್ನು ಒಪ್ಪಿರಲಿಲ್ಲ. ಮುಂದಿನ ವಿಚಾರಣೆ ವೇಳೆ ವಿವೇಕ್ ಅವರು ಖುದ್ದು ಹಾಜರಿ ಇದ್ದು ಕ್ಷಮೆ ಕೋರಬೇಕು ಎಂದು ನ್ಯಾಯಮೂರ್ತಿಗಳು ಹೇಳಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ 2023ರ ಮಾರ್ಚ್ 16ರಂದು ಮುಂದಿನ ವಿಚಾರಣೆ ನಡೆಯಲಿದೆ. ಅಂದು ಖುದ್ದಾಗಿ ವಿವೇಕ್ ಅಗ್ನಿಹೋತ್ರಿ ಅವರು ಹಾಜರಿರಬೇಕಿದೆ.