ವ್ಯಾಲೆಂಟೈನ್ಸ್ ಡೇ ದಿನ ಪತ್ನಿಯೊಂದಿಗೆ ಎಂಜಾಯ್ ಮಾಡಲು ಹೋಗಿ ಬಾಲಿವುಡ್ ನಟ ವಿವೇಕ್ ಒಬೇರಾಯ್ ಪೇಚಿಗೆ ಸಿಲುಕಿದ್ದಾರೆ. ಮಾಸ್ಕ್ ಧರಿಸದೇ ಪತ್ನಿಯೊಂದಿಗೆ ಬೈಕ್ನಲ್ಲಿ ಓಡಾಡುತ್ತಿದ್ದ ವಿಡಿಯೋ ಶೇರ್ ಮಾಡಿದ್ದ ವಿವೇಕ್ ಒಬೆರಾಯ್ ವಿರುದ್ಧ ಮುಂಬೈ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಮಹಾರಾಷ್ಟ್ರದಲ್ಲಿ ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿರುವ ಬೆನ್ನಲ್ಲೇ ಮಾಸ್ಕ್ ಧರಿಸದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮೊದಲೇ ಸೂಚನೆ ನೀಡಲಾಗಿದೆ.
ಬಾಲಿವುಡ್ ನಟ ವಿವೇಕ್ ಒಬೆರಾಯ್ ವಿರುದ್ಧ ಜುಹು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಡಿಯೋದಲ್ಲಿ ವಿವೇಕ್ ಒಬೆರಾಯ್ ತಮ್ಮ ಹೊಸ ಬೈಕಿನಲ್ಲಿ ಮಾಸ್ಕ್ ಇಲ್ಲದೇ ಹೆಲ್ಮೆಟ್ ಕೂಡ ಧರಿಸದೇ ಹೋಗುತ್ತಿರೋದನ್ನ ಕಾಣಬಹುದಾಗಿದೆ. ಒಬೇರಾಯ್ ವಿರುದ್ಧ ಐಪಿಸಿ ಸೆಕ್ಷನ್ 188 ಹಾಗೂ 269 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಅಲ್ಲದೇ ಹೆಲ್ಮೆಟ್ ಧರಿಸದ ಕಾರಣಕ್ಕೆ ನಟನ ಬಳಿ 500 ರೂಪಾಯಿ ದಂಡ ವಸೂಲಿ ಮಾಡಲಾಗಿದೆ ಎಂದು ಮಹಾರಾಷ್ಟ್ರ ಟ್ರಾಫಿಕ್ ಪೊಲೀಸ್ ಇಲಾಖೆ ಮಾಹಿತಿ ನೀಡಿದೆ.
https://www.instagram.com/tv/CLRc1INHVpi/?utm_source=ig_web_copy_link