alex Certify BREAKING : ವಿಧಾನಸಭೆಯಲ್ಲಿ ‘ಸಿವಿಲ್ ಪ್ರಕ್ರಿಯಾ ಸಂಹಿತೆ’ ವಿಧೇಯಕಕ್ಕೆ ಧ್ವನಿಮತದ ಅಂಗೀಕಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ವಿಧಾನಸಭೆಯಲ್ಲಿ ‘ಸಿವಿಲ್ ಪ್ರಕ್ರಿಯಾ ಸಂಹಿತೆ’ ವಿಧೇಯಕಕ್ಕೆ ಧ್ವನಿಮತದ ಅಂಗೀಕಾರ

ಬೆಂಗಳೂರು : ಆರ್ಥಿಕವಾಗಿ ದುರ್ಬಲವಾದ ಜನರ ಪ್ರಕರಣಗಳನ್ನು ಆರು ತಿಂಗಳ ಕಾಲಮಿತಿಯೊಳಗಾಗಿ ಇತ್ಯರ್ಥಪಡಿಸುವ ಉದ್ದೇಶದಿಂದ ವಿಧಾನಸಭೆಯಲ್ಲಿ ‘ಸಿವಿಲ್ ಪ್ರಕ್ರಿಯಾ ಸಂಹಿತೆ’ ವಿಧೇಯಕ ಅಂಗೀಕಾರಗೊಂಡಿದೆ.

ಈ ಬಗ್ಗೆ ಸದನದಲ್ಲಿ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ. ಪಾಟೀಲ್ ಈ ವಿಧೇಯಕಕ್ಕೆ ಈಗಾಗಲೇ ವಿಧಾನಸಭೆ ಅಂಗೀಕಾರ ನೀಡಿದೆ. ವಿಧಾನಪರಿಷತ್ನಲ್ಲೂ ಅಂಗೀಕಾರವಾಗಿರುವುದರಿಂದ ಕಾನೂನು ಜಾರಿಗೆ ಬರಲಿದೆ. ಹೀಗಾಗಿ ದೀರ್ಘಕಾಲದಿಂದ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಆರು ತಿಂಗಳ ಕಾಲಮಿತಿಯೊಳಗಾಗಿ ಇತ್ಯರ್ಥಪಡಿಸಲು ನೆರವಾಗಲಿದೆ ಎಂದರು.

ನ್ಯಾಯಾಲಯಗಳಲ್ಲಿ ಬಡ ಜನರಿಗೆ ನ್ಯಾಯ ಒದಗಿಸಲು ಅನುಕೂಲವಾಗುವ ಸಿವಿಲ್ ಪ್ರಕ್ರಿಯಾ ಸಂಹಿತೆ ಕರ್ನಾಟಕ ತಿದ್ದುಪಡಿ ವಿಧೇಯಕ-2023 ಕ್ಕೆ ವಿಧಾನಪರಿಷತ್ ಧ್ವನಿ ಮತದ ಅಂಗೀಕಾರ ನೀಡಿತು. ಅದೇ ರೀತಿ ರಾಜ್ಯದ ಕಾನೂನು ವಿವಿಗೆ ಕಾಯಕಲ್ಪ ನೀಡಲು ಸರ್ಕಾರ ನಿರ್ಧರಿಸಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ. ಪಾಟೀಲ್ ಹೇಳಿದರು.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...