
ತುಮಕೂರು: ರಾಜ್ಯದ 14 ಕ್ಷೇತ್ರಗಳಲ್ಲಿ ಲೋಕಸಭಾ ಚುನಾವಣೆ ಮತದಾನ ಚುರುಕುಗೊಂಡಿದೆ. ಈ ನಡುವೆ ಮತದಾರರೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.
ತುಮಕೂರಿನ ಎಸ್.ಎಸ್.ಪುರಂ ಮತಗಟ್ಟೆಯಲ್ಲಿ ಮತಚಲಾಯಿಸಿ ವಾಪಾಸ್ ಆಗಿದ್ದ ಮತದಾರ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಹೆಚ್.ಕೆ.ರಮೇಶ್ ಮೃತ ದುರ್ದೈವಿ.
ರಮೇಶ್ ಪತ್ನಿ ಜೊತೆ ಮತಗಟ್ಟೆಗೆ ತೆರಳಿ ಮತದಾನ ಮಾಡಿ ತಮ್ಮದೇ ಮಾಲಿಕತ್ವದ ಬಟ್ಟೆ ಅಂಗಡಿಗೆ ಬಂದಿದ್ದರು. ಅಂಗಡಿಯಲ್ಲಿ ಏಕಾಏಕಿ ಕುಸಿದು ಬಿದ್ದ ರಮೇಶ್ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.