ಬೆಂಗಳೂರು: ಬೆಂಗಳೂರಿನಲ್ಲಿ ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲಸೂರು ಗೇಟ್ ಠಾಣೆ ಪೊಲೀಸರು ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ.
ಮಧ್ಯವರ್ತಿ ಶಿವಕುಮಾರ್ ಬಂಧಿತ ಆರೋಪಿ. ಬಿಬಿಎಂಪಿ ಅಧಿಕಾರಿಗಳ ಸಹಿ ಪಡೆದು ಐಡಿ ಕಾರ್ಡ್ ಗಳನ್ನು ಚಿಲುಮೆ ಸಂಸ್ಥೆಗೆ ತಂದುಕೊಡುತ್ತಿದ್ದ ಶಿವಕುಮಾರ್ ನನ್ನು ಬಂಧಿಸಲಾಗಿದೆ. ಪ್ರಕರಣದ ತನಿಖೆ ಕೈಗೊಂಡಿರುವ ಪೊಲೀಸರು ಬಂಧಿತ ಶಿವಕುಮಾರ್ ವಿಚಾರಣೆ ನಡೆಸಿದ್ದಾರೆ.