ಬೆಂಗಳೂರು: ಬೆಂಗಳೂರಿನಲ್ಲಿ ವೋಟರ್ ಐಡಿ ಸಂಗ್ರಹಿಸಿದ್ದ ನಾಲ್ವರನ್ನು ಭಾರತಿನಗರ ಠಾಣೆ ಪೊಲೀಸರು ಹಾಗೂ ಫ್ಲೈಯಿಂಗ್ ಸ್ಕ್ವಾಡ್ ಸಿಬ್ಬಂದಿ ವಶಕ್ಕೆ ಪಡೆದುಕೊಂಡಿದ್ದಾರೆ.
ಶಿವಾಜಿನಗರ ಕ್ಷೇತ್ರದಲ್ಲಿ ಮತದಾರರಿಂದ ವೋಟರ್ ಐಡಿ ಸಂಗ್ರಹಿಸುತ್ತಿದ್ದ ಹಿನ್ನೆಲೆಯಲ್ಲಿ ನಾಲ್ವರನ್ನು ವಶಕ್ಕೆ ಪಡೆಯಲಾಗಿದೆ. ಹಣ ಕೊಡುವುದಾಗಿ ಹೇಳಿ ಇವರು ವೋಟರ್ ಐಡಿ ಸಂಗ್ರಹಿಸಿದ್ದರು. ಒಂದು ವೋಟಿಗೆ ಎರಡು ಸಾವಿರ ರೂಪಾಯಿ ನೀಡುವುದಾಗಿ ಹೇಳಿ ಸಂಗ್ರಹಿಸುತ್ತಿದ್ದರು. ಈ ಸಂಬಂಧ ಶಿವಾಜಿನಗರ ಕಾಂಗ್ರೆಸ್ ಕಾರ್ಯಕರ್ತ ದೂರು ನೀಡಿದ್ದು, ದೂರಿನ ಮೇರೆಗೆ ನಾಲ್ವರನ್ನು ವಶಕ್ಕೆ ಕರೆಯಲಾಗಿದೆ.
ಈ ವೇಳೆ 15ಕ್ಕೂ ಹೆಚ್ಚು ವೋಟರ್ ಐಡಿ ಮತ್ತು ಆಧಾರ್ ಕಾರ್ಡ್ ಪತ್ತೆಯಾಗಿವೆ. ಭಾರತಿನಗರ ಪೊಲೀಸ್ ಠಾಣೆಗೆ ಫ್ಲೈಯಿಂಗ್ ಸ್ಕ್ವಾಡ್ ದೂರು ನೀಡಿದೆ. ನಾಲ್ವರನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.