ಬೆಂಗಳೂರು: ಬೆಂಗಳೂರಿನಲ್ಲಿ ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸ ಗೌಡ ಹೇಳಿಕೆ ನೀಡಿದ್ದಾರೆ.
ಕೆಂಪೇಗೌಡ ಆಪ್ ಮೂಲಕ ಮಾಹಿತಿಯನ್ನು ಸಂಗ್ರಹಿಸಿ ಕೊಡುತ್ತಿದ್ದ. ಆ ಮೂಲಕ ಸಂಗ್ರಹಿಸಿದ ಮಾಹಿತಿಯನ್ನು ರವಿಕುಮಾರ್ ಗೆ ನೀಡುತ್ತಿದ್ದ. ಮಾಹಿತಿಯನ್ನು ಬೇರೆ ರೀತಿಯಲ್ಲಿ ಬಳಸುತ್ತಿದ್ದ ಬಗ್ಗೆ ಮಾಹಿತಿ ಸಿಕ್ಕಿದೆ. ವಿಚಾರಣೆ ವೇಳೆ ಆರೋಪಿ ಕೆಂಪೇಗೌಡ ಈ ಬಗ್ಗೆ ಮಾಹಿತಿ ನೀಡಿದ್ದಾನೆ ಎಂದು ತಿಳಿಸಿದ್ದಾರೆ.
ಪ್ರಕರಣ ಸಂಬಂಧ ಈವರೆಗೆ 15 ಜನರ ವಿಚಾರಣೆ ನಡೆಸಲಾಗಿದೆ. ಮೂವರು ಆರೋಪಿಗಳನ್ನು ಬಂಧಿಸಿ ತನಿಖೆ ತೀವ್ರಗೊಳಿಸಲಾಗಿದೆ. ಡಿಜಿಟಲ್ ಆಪ್ ಡೆವಲಪ್ಮೆಂಟ್ ಮಾಡಿದವರನ್ನು ವಶಕ್ಕೆ ಪಡೆದು ತನಿಖೆ ಕೈಗೊಳ್ಳಲಾಗಿದೆ. ಲ್ಯಾಪ್ಟಾಪ್ ಗಳನ್ನು ವಶಕ್ಕೆ ಪಡೆಯಲಾಗಿದ್ದು, ವಿಚಾರಣೆ ಮುಂದುವರೆದಿದೆ. ನಾಳೆಯಿಂದ ಬಿಬಿಎಂಪಿ ಆರ್.ಒ.ಗಳ ವಿಚಾರಣೆ ಮಾಡಲಾಗುವುದು ಎಂದು ಹೇಳಿದ್ದಾರೆ.