
ಬೆಂಗಳೂರು: ಇಬ್ಬರು ಐಎಎಸ್ ಅಧಿಕಾರಿಗಳ ಅಮಾನತು ಆದೇಶ ವಾಪಸ್ ಪಡೆಯಲಾಗಿದೆ. ವೋಟರ್ ಐಡಿ ಅಕ್ರಮ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ಅಮಾನತುಗೊಂಡ ಇಬ್ಬರು ಐಎಎಸ್ ಅಧಿಕಾರಿಗಳ ಅಮಾನತು ಆದೇಶವನ್ನು ಸರ್ಕಾರ ವಾಪಸ್ ಪಡೆದಿದೆ.
ವೋಟರ್ ಐಡಿ ಅಕ್ರಮ ಕೇಸ್ ನಲ್ಲಿ ಅಮಾನತುಗೊಂಡಿದ್ದ ಐಎಎಸ್ ಅಧಿಕಾರಿಗಳಾದ ಕೆ. ಶ್ರೀನಿವಾಸ್ ಮತ್ತು ರಂಗಪ್ಪ ಅವರ ಅಮಾನತು ಆದೇಶ ವಾಪಸ್ ಪಡೆಯಲಾಗಿದೆ. ಇಬ್ಬರು ಅಧಿಕಾರಿಗಳಿಗೆ ಸ್ಥಳ ನಿಯುಕ್ತಿಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.