
ಬೆಂಗಳೂರು: ಬೆಂಗಳೂರಿನಲ್ಲಿ ವೋಟರ್ ಐಡಿ ಪರಿಷ್ಕರಣಿಯಲ್ಲಿ ಅಕ್ರಮಕ್ಕೆ ಸಂಬಂಧಿಸಿದಂತೆ ಚಿಲುಮೆ ಸಂಸ್ಥೆ ಕಚೇರಿಗಳ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ.
ಬೆಂಗಳೂರಿನ ವಿವಿಧೆಡೆ ಕಚೇರಿಗಳ ಮೇಲೆ ದಾಳಿ ಮಾಡಿ ದಾಖಲೆಗಳ ಪರಿಶೀಲನೆ ನಡೆಸಲಾಗಿದೆ. ಮಹದೇವಪುರ, ರಾಜಾಜಿನಗರ, ಆರ್.ಆರ್. ನಗರದ ಕಚೇರಿಗಳ ಮೇಲೆ ದಾಳಿ ನಡೆಸಲಾಗಿದೆ. ಚಿಲುಮೆ ಸಂಸ್ಥೆಯ ಸಂಸ್ಥಾಪಕ ರವಿಕುಮಾರ್ ಆಪ್ತ ಮಾರುತಿ ಮನೆಯ ಮೇಲೆಯೂ ದಾಳಿ ಮಾಡಲಾಗಿದ್ದು, ದಾಖಲೆಗಳ ಪರಿಶೀಲನೆ ನಡೆಸಲಾಗಿದೆ. ದಾಳಿಯ ವೇಳೆ 5 ಕಂಪ್ಯೂಟರ್, 2 ಮೊಬೈಲ್ ಇತರೆ ವಸ್ತು, ದಾಖಲೆ ವಶಕ್ಕೆ ಪಡೆಯಲಾಗಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.