ಬೆಂಗಳೂರು: ಸರ್ಕಾರಿ ಪ್ರಾಥಮಿಕ ಶಾಲೆಗಳ ಸುಮಾರು 60 ಸಾವಿರಕ್ಕೂ ಅಧಿಕ ಶಿಕ್ಷಕರನ್ನು ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯಕ್ಕೆ ನಿಯೋಜಿಸಲಾಗಿದೆ. ಬೇರೆ ಸರ್ಕಾರಿ ನೌಕರರಿಗಿಂತ ಶಿಕ್ಷಕರನ್ನೇ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗೆ ನಿಯೋಜಿಸಲಾಗಿದ್ದು, ಶಾಲಾ ಮಕ್ಕಳ ಕಲಿಕೆ, ಶೈಕ್ಷಣಿಕ ಚಟುವಟಿಕೆಗಳಿಗೆ ಹಿನ್ನಡೆಯಾಗಲಿದೆ ಎಂದು ಹೇಳಲಾಗಿದೆ.
ರಾಜ್ಯದಲ್ಲಿ 45 ಸಾವಿರಕ್ಕೂ ಅಧಿಕ ಪ್ರಾಥಮಿಕ ಮತ್ತು ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ 30 ಲಕ್ಷಕ್ಕೂ ಅಧಿಕ ಮಕ್ಕಳಿದ್ದು, ಈ ಮಕ್ಕಳಿಗೆ ಪಾಠ ಮಾಡಲು 1.56 ಲಕ್ಷ ಶಿಕ್ಷಕರಿದ್ದಾರೆ. ಇವರಲ್ಲಿ ಸುಮಾರು 60 ಸಾವಿರಕ್ಕೂ ಅಧಿಕ ಶಿಕ್ಷಕರನ್ನು ಮತದಾರರ ಪಟ್ಟಿ ಪರಿಷ್ಕರಣೆಗೆ ಬ್ಲಾಕ್ ಹಂತದ ಅಧಿಕಾರಿಗಳಾಗಿ ನಿಯೋಜಿಸಲಾಗಿದೆ.
ಬೇರೆ ಸರ್ಕಾರಿ ನೌಕರರಿಗಿಂತ ಶಿಕ್ಷಕರನ್ನೇ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗೆ ನಿಯೋಜಿಸಲಾಗಿದ್ದು, ಶೈಕ್ಷಣಿಕ ಚಟುವಟಿಕೆಗಳಿಗೆ ಭಾರಿ ಹಿನ್ನಡೆಯಾಗುವ ಆತಂಕ ಕಾಡುತ್ತಿದೆ. ಶಿಕ್ಷಕರ ಕೊರತೆ ಇರುವ ಶಾಲೆಗಳಲ್ಲಿ ತೀವ್ರ ಸಮಸ್ಯೆಯಾಗಲಿದೆ. ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಒತ್ತಾಯ ಕೇಳಿ ಬಂದಿದೆ.