alex Certify ಗಮನಿಸಿ: ಮತದಾರರ ಪಟ್ಟಿಗೆ ಹೆಸರು ಸೇರಿಸಲು ಇಂದೇ ಕೊನೆ ದಿನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ: ಮತದಾರರ ಪಟ್ಟಿಗೆ ಹೆಸರು ಸೇರಿಸಲು ಇಂದೇ ಕೊನೆ ದಿನ

ಬೆಂಗಳೂರು: ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಕೇಂದ್ರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ರಾಜ್ಯದ 14 ಕ್ಷೇತ್ರಗಳಲ್ಲಿ ಏಪ್ರಿಲ್ 26ರಂದು ಮತದಾನ ನಡೆಯಲಿದೆ. ಈ ಲೋಕಸಭೆ ಕ್ಷೇತ್ರಗಳಲ್ಲಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಮಾರ್ಚ್ 25 ಕೊನೆಯ ದಿನವಾಗಿದೆ.

ಸೋಮವಾರ ಹೊಸದಾಗಿ ಮತದಾರರ ನೋಂದಣಿಗೆ ಅಥವಾ ಮತದಾರರ ಚೀಟಿಯಲ್ಲಿ ಪರಿಷ್ಕರಣೆಗೆ ಗಡುವು ಮುಕ್ತಾಯವಾಗುತ್ತದೆ.

ಮೇ 7ರಂದು ಧಾರವಾಡ, ಉತ್ತರ ಕನ್ನಡ, ಶಿವಮೊಗ್ಗ, ದಾವಣಗೆರೆ ಸೇರಿದಂತೆ 14 ಕ್ಷೇತ್ರಗಳಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಅಥವಾ ತಿದ್ದುಪಡಿಗೆ ಏಪ್ರಿಲ್ 9ರವರೆಗೂ ಅವಕಾಶವಿದೆ. ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿಯಾಗಿದ್ದರೆ ಮತದಾರರ ಗುರುತಿನ ಚೀಟಿ ಇಲ್ಲದಿದ್ದರೂ ಆಯೋಗ ಸೂಚಿಸಿದ ದಾಖಲೆಗಳಲ್ಲಿ ಒಂದನ್ನು ತೋರಿಸಿ ಮತದಾನ ಮಾಡಬಹುದಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...