alex Certify ಮತದಾರರಿಗೆ ಆಮಿಷ ಆರೋಪ: ಡಿ. ಸುಧಾಕರ್ ವಿರುದ್ಧ ಕೇಸ್ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮತದಾರರಿಗೆ ಆಮಿಷ ಆರೋಪ: ಡಿ. ಸುಧಾಕರ್ ವಿರುದ್ಧ ಕೇಸ್ ದಾಖಲು

ಚಿತ್ರದುರ್ಗ: ಮತದಾರರಿಗೆ ಆಮಿಷವೊಡ್ಡಿದ ಆರೋಪದ ಮೇರೆಗೆ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಿಸಲಾಗಿದೆ.

ಏಪ್ರಿಲ್ 14ರಂದು ನಾಯಕನಹಟ್ಟಿಯಲ್ಲಿ ನಡೆದ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಸಚಿವ ಡಿ. ಸುಧಾಕರ್ ಮಾತನಾಡಿ, ನಾಯಕನಹಟ್ಟಿ ಮತ್ತು ತಳಕು ಭಾಗದಲ್ಲಿ ಕಾಂಗ್ರೆಸ್ ಗೆ 70 ಸಾವಿರ ಲೀಡ್ ಕೊಟ್ಟರೆ ಈ ಭಾಗಕ್ಕೆ 25 ಕೋಟಿ ರೂ. ಅನುದಾನ ಕೊಡುವುದಾಗಿ ಭರವಸೆ ನೀಡಿದ್ದರು.

ಪ್ರಚಾರದ ವೇಳೆ ಮತದಾರರಿಗೆ ಆಮಿಷವೊಡ್ಡಿದ ಪ್ರಕರಣ ಇದಾಗಿದೆ. ಇದು ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂದು ಚುನಾವಣಾ ಅಧಿಕಾರಿ ಮಂಜುನಾಥ್ ದೂರು ದಾಖಲಿಸಿದ್ದು, ನಾಯಕನಹಟ್ಟಿಯಲ್ಲಿ ಸಚಿವ ಸುಧಾಕರ್ ಅವರ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...