alex Certify ಮತದಾರರಿಗೆ ಗುಡ್ ನ್ಯೂಸ್: ಎಲ್ಲಾ ಮತಗಟ್ಟೆಗಳಲ್ಲಿ ವಿಶೇಷ ಆಂದೋಲನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮತದಾರರಿಗೆ ಗುಡ್ ನ್ಯೂಸ್: ಎಲ್ಲಾ ಮತಗಟ್ಟೆಗಳಲ್ಲಿ ವಿಶೇಷ ಆಂದೋಲನ

ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ – 2022 ಕ್ಕೆ ಸಂಬಂಧಿಸಿದಂತೆ ಭಾರತ ಚುನಾವಣಾ ಆಯೋಗದ ನಿರ್ದೇಶನದನ್ವಯ 2021 ನೇ ಸಾಲಿನ ನವೆಂಬರ್ ನಲ್ಲಿ ಮತದಾರರ ವಿಶೇಷ ಆಂದೋಲನ ಹಮ್ಮಿಕೊಳ್ಳಲಾಗಿದೆ.

ದಿನಾಂಕ: 07-11-2021, 14-11-2021, 21-11-2021 ಹಾಗೂ 28-11-2021 ರಂದು ಮತದಾರರ ವಿಶೇಷ ಆಂದೋಲನ ಕಾರ್ಯಕ್ರಮವನ್ನು ಎಲ್ಲಾ ಮತಗಟ್ಟೆಗಳಲ್ಲಿ ಆಯೋಜಿಸಲಾಗಿದೆ. ಅಂದು ಎಲ್ಲಾ ಮತಗಟ್ಟೆ ಮಟ್ಟದ ಅಧಿಕಾರಿಗಳು ಮತಗಟ್ಟೆಗಳಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರಿಗೆ ಹಾಜರಿದ್ದು ಸಾರ್ವಜನಿಕರಿಂದ ಹಕ್ಕು ಮತ್ತು ಆಕ್ಷೇಪಣೆಯನ್ನು ಸ್ವೀಕರಿಸಲಿದ್ದಾರೆ.

ಈ ಅವಧಿಯಲ್ಲಿ ಸಾರ್ವಜನಿಕರು ಮತದಾರರ ವಿಶೇಷ ಆಂದೋಲನ ಕಾರ್ಯಕ್ರಮದ ಸದುಪಯೋಗ ಪಡೆಯುವಂತೆ ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಸಹಾಯಕ ಮತದಾರರ ನೋಂದಣಾಧಿಕಾರಿ ಮತ್ತು ಶಿವಮೊಗ್ಗ ತಾಲ್ಲೂಕು ತಹಶೀಲ್ದಾರ್ ಎನ್.ಜೆ.ನಾಗರಾಜ್ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...