
ನವೆಂಬರ್ 18 ರಿಂದ ಮತದಾರರ ವಿಶೇಷ ಪರಿಷ್ಕರಣೆ ಅಭಿಯಾನ ಆರಂಭವಾಗಿದ್ದು, ಡಿಸೆಂಬರ್ 17 ರವರೆಗೆ ನಡೆಯಲಿದೆ.
2021 ರ ಜನವರಿ 1 ಕ್ಕೆ 18 ವರ್ಷ ತುಂಬುವ ಮತ್ತು ಮೇಲ್ಪಟ್ಟ ಎಲ್ಲ ನಾಗರಿಕರು ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಬಹುದು. ತಮ್ಮ ಇತ್ತೀಚಿನ ಎರಡು ಭಾವಚಿತ್ರ ಮತ್ತು ವಿಳಾಸದ ಪುರಾವೆಯೊಂದಿಗೆ ಸಂಬಂಧಿಸಿದ ಕಂದಾಯ ವಾರ್ಡ್ ಕಚೇರಿ, ತಹಶೀಲ್ದಾರ್ ಕಚೇರಿ ಅಥವಾ ಸ್ಥಳೀಯ ಮತಗಟ್ಟೆಗೆ ಭೇಟಿ ನೀಡಿ ಹೆಸರು ನೋಂದಾಯಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 1950 ಗೆ ಕರೆ ಮಾಡಬಹುದಾಗಿದೆ.
ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ಕೈಬಿಡುವುದು, ಅಥವಾ ಬದಲಾವಣೆ ಇದ್ದಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಅಭಿಯಾನದಲ್ಲಿ ಅವಕಾಶವಿರುತ್ತದೆ ಎಂದು ಹೇಳಲಾಗಿದೆ.