alex Certify ಮತದಾರರಿಗೆ ಇಲ್ಲಿದೆ ಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮತದಾರರಿಗೆ ಇಲ್ಲಿದೆ ಮುಖ್ಯ ಮಾಹಿತಿ

ನವೆಂಬರ್ 18 ರಿಂದ ಮತದಾರರ ವಿಶೇಷ ಪರಿಷ್ಕರಣೆ ಅಭಿಯಾನ ಆರಂಭವಾಗಿದ್ದು, ಡಿಸೆಂಬರ್ 17 ರವರೆಗೆ ನಡೆಯಲಿದೆ.

2021 ರ ಜನವರಿ 1 ಕ್ಕೆ 18 ವರ್ಷ ತುಂಬುವ ಮತ್ತು ಮೇಲ್ಪಟ್ಟ ಎಲ್ಲ ನಾಗರಿಕರು ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಬಹುದು. ತಮ್ಮ ಇತ್ತೀಚಿನ ಎರಡು ಭಾವಚಿತ್ರ ಮತ್ತು ವಿಳಾಸದ ಪುರಾವೆಯೊಂದಿಗೆ ಸಂಬಂಧಿಸಿದ ಕಂದಾಯ ವಾರ್ಡ್ ಕಚೇರಿ, ತಹಶೀಲ್ದಾರ್ ಕಚೇರಿ ಅಥವಾ ಸ್ಥಳೀಯ ಮತಗಟ್ಟೆಗೆ ಭೇಟಿ ನೀಡಿ ಹೆಸರು ನೋಂದಾಯಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 1950 ಗೆ ಕರೆ ಮಾಡಬಹುದಾಗಿದೆ.

ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ಕೈಬಿಡುವುದು, ಅಥವಾ ಬದಲಾವಣೆ ಇದ್ದಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಅಭಿಯಾನದಲ್ಲಿ ಅವಕಾಶವಿರುತ್ತದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...