ಗುಜರಾತ್ ನಲ್ಲಿ ನಾಳೆ ಎರಡನೇ ಹಂತದ ವಿಧಾನಸಭಾ ಚುನಾವಣೆಗೆ ಮತದಾನ ನಡೆಯಲಿದೆ. ಅಹಮದಾಬಾದ್, ವಡೋದರಾ ಮತ್ತು ಗಾಂಧಿನಗರ ಸೇರಿದಂತೆ 14 ಜಿಲ್ಲೆಗಳ 93 ಕ್ಷೇತ್ರಗಳಲ್ಲಿ ಬೆಳಿಗ್ಗೆ 8 ರಿಂದ ಸಂಜೆ 5 ರವರೆಗೆ ಮತದಾನ ನಡೆಯಲಿದೆ.
69 ಮಹಿಳಾ ಅಭ್ಯರ್ಥಿಗಳು ಸೇರಿದಂತೆ ಒಟ್ಟು 833 ಸ್ಪರ್ಧಿಗಳು ಕಣದಲ್ಲಿದ್ದಾರೆ. ಎರಡೂ ಹಂತಗಳ ಮತ ಎಣಿಕೆ ಡಿಸೆಂಬರ್ 8 ರಂದು ನಡೆಯಲಿದೆ.
ಶಾಂತಿಯುತ ಚುನಾವಣೆಯನ್ನು ಖಚಿತಪಡಿಸಿಕೊಳ್ಳಲು ಚುನಾವಣಾ ಆಯೋಗವು ಎಲ್ಲಾ ಅಗತ್ಯ ವ್ಯವಸ್ಥೆಗಳನ್ನು ಮಾಡಿದೆ. ಮತದಾನ ನಡೆಯುವ ಜಿಲ್ಲೆಗಳಲ್ಲಿ 26 ಸಾವಿರಕ್ಕೂ ಹೆಚ್ಚು ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಇದೇ ವೇಳೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ಪಿ. ಭಾರತಿ ಅವರು ನಗರ ಪ್ರದೇಶದ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಮನವಿ ಮಾಡಿದ್ದಾರೆ.
ಮತದಾನಕ್ಕೆ ಅಗತ್ಯ ವ್ಯವಸ್ಥೆ ಕಲ್ಪಿಸುವ ಸಲುವಾಗಿ ಎಲ್ಲಾ ಮತಗಟ್ಟೆಗಳಿಗೆ ಮತಗಟ್ಟೆ ಸಾಮಗ್ರಿಗಳೊಂದಿಗೆ ಅವರ ನಿಗದಿತ ಮತಗಟ್ಟೆಗಳಿಗೆ ರವಾನಿಸಲಾಗುತ್ತಿದೆ. ವಯೋವೃದ್ಧರು ಮತ್ತು ದಿವ್ಯಾಂಗ ಮತದಾರರಿಗೆ ಅನುಕೂಲವಾಗುವಂತೆ ಎಲ್ಲಾ ಮತಗಟ್ಟೆಗಳನ್ನು ನೆಲ ಮಹಡಿಯಲ್ಲಿ ಸ್ಥಾಪಿಸಲಾಗಿದೆ.
ಎಲ್ಲಾ 93 ಕ್ಷೇತ್ರಗಳಲ್ಲಿ ಒಂದು ಮಾದರಿ ಮತಗಟ್ಟೆ, ದಿವ್ಯಾಂಗರ ನಿರ್ವಹಣೆಯ ಒಂದು ಮತಗಟ್ಟೆ ಮತ್ತು ಒಂದು ಪರಿಸರ ಸ್ನೇಹಿ ಮತಗಟ್ಟೆ ಇರುತ್ತದೆ.
ಇದಲ್ಲದೆ, ಸುಮಾರು 650 ಸಖಿ ಮತಗಟ್ಟೆಗಳಿದ್ದು, ಎಲ್ಲಾ ಮತಗಟ್ಟೆ ಮತ್ತು ಪೊಲೀಸ್ ಸಿಬ್ಬಂದಿ ಮಹಿಳೆಯರೇ ಇರುತ್ತಾರೆ. ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಯನ್ನು ಖಚಿತಪಡಿಸಿಕೊಳ್ಳಲು, ಈ ಹಂತದಲ್ಲಿ 13,300 ಬೂತ್‌ಗಳಲ್ಲಿ ಲೈವ್ ವೆಬ್‌ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗುವುದು.