ಬೆಂಗಳೂರು: ರಾಜ್ಯದಲ್ಲಿ ಎರಡು ಹಂತದಲ್ಲಿ ಲೋಕಸಭೆ ಚುನಾವಣೆಗೆ ಮತದಾನ ನಡೆಯುವ ದಿನಗಳಂದು ಸಾರ್ವತ್ರಿಕ ರಜೆ ಘೋಷಣೆ ಮಾಡಲಾಗಿದೆ.
ಸರ್ಕಾರ ಏಪ್ರಿಲ್ 26 ಮತ್ತು ಮೇ 7ರಂದು ತಲಾ 14 ಕ್ಷೇತ್ರಗಳಲ್ಲಿ ನಡೆಯುವ ಚುನಾವಣೆಗೆ ಸಾರ್ವತ್ರಿಕ ರಜೆ ಘೋಷಿಸಿದೆ. ಚುನಾವಣೆಯಲ್ಲಿ ಮತದಾರರು ಮತ ಚಲಾಯಿಸಲು ಅನುಕೂಲವಾಗುವಂತೆ ಆಯಾ ಕ್ಷೇತ್ರಗಳ ವ್ಯಾಪ್ತಿಯಲ್ಲಿನ ಎಲ್ಲಾ ಸರ್ಕಾರಿ ಕಚೇರಿಗಳು, ಶಾಲೆ, ಕಾಲೇಜುಗಳು, ಖಾಸಗಿ ಸಂಸ್ಥೆಗಳಿಗೆ ರಜೆ ಘೋಷಣೆ ಮಾಡಿದೆ.