alex Certify ಮತದಾನ ದಿನವಾದ ಮೇ.10 ರಂದು ಕಾರ್ಮಿಕರಿಗೆ ವೇತನ ಸಹಿತ ರಜೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮತದಾನ ದಿನವಾದ ಮೇ.10 ರಂದು ಕಾರ್ಮಿಕರಿಗೆ ವೇತನ ಸಹಿತ ರಜೆ

ಭಾರತ ಚುನಾವಣಾ ಆಯೋಗವು ಕರ್ನಾಟಕ ವಿಧಾನ ಸಭೆ ಸಾರ್ವತ್ರಿಕ ಚುನಾವಣೆಯ ಮತದಾನಕ್ಕೆ ಮೇ.10 ಬುಧವಾರದಂದು ದಿನ ನಿಗದಿಪಡಿಸಿದೆ.

ಸದರಿ ದಿನದಂದು ರಾಜ್ಯಾದ್ಯಂತ ಎಲ್ಲಾ ಕಾರ್ಖಾನೆಗಳು, ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ 1951ರ ಪ್ರಜಾ ಪ್ರತಿನಿಧಿ ಕಾಯ್ದೆ, ಸೆಕ್ಷನ್ 135(ಬಿ) ರಡಿ ಹಾಗೂ ಕೈಗಾರಿಕಾ ಸಂಸ್ಥೆಗಳ(ರಾಷ್ಟ್ರೀಯ ಮತ್ತು ಹಬ್ಬದ ರಜೆಗಳು) ಕಾಯ್ದೆ-1963 ಕಲಂ 3(ಎ)ರನ್ವಯ ಅರ್ಹ ಮತದಾರರಿಗೆ ವೇತನ ಸಹಿತ ರಜೆ ಘೋಷಿಸಿ ಸಂವಿಧಾನಾತ್ಮಕ ಹಕ್ಕಾದ ಮತವನ್ನು ಚಲಾಯಿಸುವುದಕ್ಕಾಗಿ ಎಲ್ಲಾ ಮಾಲೀಕರು, ನಿಯೋಜಕರು ಅನುವು ಮಾಡಿ ಕೊಡಬೇಕಾಗುತ್ತದೆ.

ಆದ್ದರಿಂದ ಚುನಾವಣೆ ನಡೆಯುವ ಕ್ಷೇತ್ರಗಳ ವ್ಯಾಪ್ತಿಯ ಎಲ್ಲಾ ಕಾರ್ಖಾನೆಗಳು, ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಮಾಲೀಕರು ಮೇ.10 ರಂದು ಕಾಯ್ದೆಯನ್ವಯ ಅರ್ಹ ಕಾರ್ಮಿಕರು ಮತದಾನ ಮಾಡಲು ಅನುಕೂಲವಾಗುವಂತೆ ವೇತನ ಸಹಿತ ರಜೆ ನೀಡುವಂತೆ ತಿಳಿಸಲಾಗಿದೆ.

ತಪ್ಪಿದಲ್ಲಿ ಸಂಬಂಧಪಟ್ಟ ಸಂಸ್ಥೆ, ನಿಯೋಜಕರ ವಿರುದ್ಧ ನಿಯಮಾನುಸಾರ ಕಾನೂನು ಕ್ರಮ ಜರುಗಿಸಲಾಗುವುದೆಂದು ಕಾರ್ಮಿಕ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...