alex Certify ರಾಜ್ಯದ 14 ಕ್ಷೇತ್ರಗಳಲ್ಲಿ ಇಂದು ಬೆಳಗ್ಗೆ 7ರಿಂದ ಸಂಜೆ 6 ಗಂಟೆವರೆಗೆ ಮತದಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ 14 ಕ್ಷೇತ್ರಗಳಲ್ಲಿ ಇಂದು ಬೆಳಗ್ಗೆ 7ರಿಂದ ಸಂಜೆ 6 ಗಂಟೆವರೆಗೆ ಮತದಾನ

ಬೆಂಗಳೂರು: ರಾಜ್ಯದಲ್ಲಿ ಎರಡನೇ ಹಂತದ ಲೋಕಸಭೆ ಚುನಾವಣೆಗೆ ಇಂದು ಮತದಾನ ನಡೆಯಲಿದೆ. ದೇಶದಲ್ಲಿ ಮೂರನೇ ಹಂತದ ಚುನಾವಣೆ ಇದಾಗಿದೆ ಇಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವವರೆಗೆ ಮತದಾನ ನಡೆಯಲಿದ್ದು, ಜೂನ್ 4ರಂದು ಫಲಿತಾಂಶ ಪ್ರಕಟವಾಗಲಿದೆ.

ಸುಗಮವಾಗಿ ಚುನಾವಣೆ ನಡೆಸಲು ಆಯೋಗದಿಂದ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಧಾರವಾಡ, ಉತ್ತರ ಕನ್ನಡ, ಶಿವಮೊಗ್ಗ, ದಾವಣಗೆರೆ, ಹಾವೇರಿ, ಬಾಗಲಕೋಟೆ, ಬೀದರ್, ಕಲಬುರಗಿ, ವಿಜಯಪುರ, ಬಳ್ಳಾರಿ, ಕೊಪ್ಪಳ, ರಾಯಚೂರು, ಬೆಳಗಾವಿ, ಚಿಕ್ಕೋಡಿ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.

29269 ಮತಗಟ್ಟೆಗಳನ್ನು ತೆರೆಯಲಾಗಿದೆ. ಮಾಜಿ ಮುಖ್ಯಮಂತ್ರಿಗಳಾದ ಜಗದೀಶ್ ಶೆಟ್ಟರ್, ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಸೇರಿ 14 ಕ್ಷೇತ್ರಗಳಲ್ಲಿ 206 ಪುರುಷರು 21 ಮಹಿಳೆಯರು ಸೇರಿ 227 ಮಂದಿ ಕಣದಲ್ಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...