alex Certify BIG NEWS: 25 ವಿಧಾನ ಪರಿಷತ್ ಸ್ಥಾನಗಳಿಗೆ ಇಂದು ಮತದಾನ, 90 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: 25 ವಿಧಾನ ಪರಿಷತ್ ಸ್ಥಾನಗಳಿಗೆ ಇಂದು ಮತದಾನ, 90 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ

ಬೆಂಗಳೂರು: ರಾಜ್ಯದ 25 ವಿಧಾನಪರಿಷತ್ ಸ್ಥಾನಗಳಿಗೆ ಇಂದು ಮತದಾನ ನಡೆಯಲಿದೆ. ಬೆಳಿಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯ ವರೆಗೆ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ.

ಸ್ಥಳೀಯ ಸಂಸ್ಥೆಗಳ ಸದಸ್ಯರು ಮತದಾನ ಮಾಡಲಿದ್ದಾರೆ. ನಿಯಮಗಳನ್ನು ಪಾಲಿಸಿ ಮತದಾನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.

47,205 ಪುರುಷರು, 51,854 ಮಹಿಳೆಯರು ಸೇರಿ 99,062 ಅರ್ಹ ಮತದಾರರಿದ್ದಾರೆ. ರಾಜ್ಯಾದ್ಯಂತ 6072 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. 90 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಯಾವುದೇ ಚಿಹ್ನೆ ಇರುವುದಿಲ್ಲ. ಬದಲಿಗೆ ಕನ್ನಡ ಅಥವಾ ಆಂಗ್ಲದ 1, 2, 3, 4 ಸಂಖ್ಯೆಗಳು ಇರುತ್ತವೆ.  ಮತದಾನವು ಬ್ಯಾಲೆಟ್ ಪೇಪರ್ ಮೂಲಕ ನಡೆಯಲಿದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...