ನವದೆಹಲಿ: ತಮಿಳುನಾಡು, ಕೇರಳ, ಪುದುಚೇರಿಯಲ್ಲಿ ಇಂದು ಒಂದೇ ಹಂತದ ಚುನಾವಣೆಗೆ ಮತದಾನ ನಡೆಯಲಿದೆ. ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಲ್ಲಿ ಇಂದು ಮೂರನೇ ಹಂತದ ಮತದಾನ ನಡೆಯಲಿದೆ. ಮೇ 2 ರಂದು ಫಲಿತಾಂಶ ಪ್ರಕಟವಾಗಲಿದೆ.
ತಮಿಳುನಾಡು ವಿಧಾನಸಭೆಯ ಒಟ್ಟು 234 ಸ್ಥಾನಗಳಿಗೆ 3998 ಅಭ್ಯರ್ಥಿಗಳು ಕಣದಲ್ಲಿದ್ದಾರೆ. 6.28 ಮತದಾರರು ಮತ ಚಲಾಯಿಸಲಿದ್ದಾರೆ.
ಕೇರಳ ವಿಧಾನಸಭೆಯ 140 ಸ್ಥಾನಗಳಿಗೆ 957 ಅಭ್ಯರ್ಥಿಗಳು ಕಣದಲ್ಲಿದ್ದಾರೆ. 2.74 ಕೋಟಿ ಮತದಾರರು ಮತ ಚಲಾಯಿಸಲಿದ್ದಾರೆ.
ಪುದುಚೇರಿ ವಿಧಾನಸಭೆಯ ಒಟ್ಟು 30 ಸ್ಥಾನಗಳಿಗೆ 324 ಅಭ್ಯರ್ಥಿಗಳು ಕಣದಲ್ಲಿದ್ದು 10.04 ಲಕ್ಷ ಮತದಾರರು ಮತ ಚಲಾಯಿಸಲಿದ್ದಾರೆ. ಪಶ್ಚಿಮ ಬಂಗಾಳದ 31 ಹಾಗೂ ಅಸ್ಸಾಂನ 40 ಕ್ಷೇತ್ರಗಳಲ್ಲಿ ಮೂರನೇ ಹಂತದ ಮತದಾನ ನಡೆಯಲಿದೆ.