alex Certify ವರುಣಾ ಕ್ಷೇತ್ರದ ಜನರಿಗೆ ಇಂದು ಸಿಎಂ ಸಿದ್ಧರಾಮಯ್ಯ ಕೃತಜ್ಞತಾ ಕಾರ್ಯಕ್ರಮ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವರುಣಾ ಕ್ಷೇತ್ರದ ಜನರಿಗೆ ಇಂದು ಸಿಎಂ ಸಿದ್ಧರಾಮಯ್ಯ ಕೃತಜ್ಞತಾ ಕಾರ್ಯಕ್ರಮ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಇಂದು ಕೃತಜ್ಞತಾ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಮೈಸೂರು ಜಿಲ್ಲೆ ನಂಜನಗೂಡಿನ ಬಿಳಿಗೆರೆಯಲ್ಲಿ ಸಮಾವೇಶ ನಡೆಯಲಿದ್ದು, ವರುಣಾ ಕ್ಷೇತ್ರದ ಜನತೆಗೆ ಸಿದ್ದರಾಮಯ್ಯ ಕೃತಜ್ಞತೆ ಸಲ್ಲಿಸಲಿದ್ದಾರೆ.

ಬೆಳಗ್ಗೆ 11:30ಕ್ಕೆ ಬೆಂಗಳೂರಿನಿಂದ ಹೊರಟು ಮಧ್ಯಾಹ್ನ 12 20 ಕ್ಕೆ ಮೈಸೂರು ಹೆಲಿಪ್ಯಾಡ್ ಗೆ ತಲುಪಲಿದ್ದಾರೆ. 12:35 ಕ್ಕೆ ಕೃತಜ್ಞತಾ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಸಮಾವೇಶದ ಬಳಿಕ ಸುತ್ತೂರು ಮಠಕ್ಕೆ ಸಿಎಂ ಭೇಟಿ ನೀಡಲಿದ್ದು, ಸುತ್ತೂರು ಶ್ರೀಗಳ ಆಶೀರ್ವಾದ ಪಡೆಯಲಿದ್ದಾರೆ. ನಂತರ ಹೆಲಿಕಾಪ್ಟರ್ ಮೂಲಕ ಮೈಸೂರಿಗೆ ಆಗಮಿಸಿ ಸಂಜೆ 4 ಗಂಟೆಗೆ ಮೈಸೂರಿನಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ. ಇಂದು ರಾತ್ರಿ ಮೈಸೂರಿನಲ್ಲಿ ವಾಸ್ತವ್ಯ ಹೂಡಲಿರುವ ಸಿಎಂ ನಾಳೆ ಬೆಳಿಗ್ಗೆ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...