ಬೆಂಗಳೂರು: ರಾಜ್ಯದ ಹೈವೋಲ್ಟೇಜ್ ಕಣವಾದ ವರುಣಾ ವಿಧಾನಸಭೆ ಕ್ಷೇತ್ರದ ಚುನಾವಣೆ ಅಖಾಡ ರಂಗೇರಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮಣಿಸಲು ಕೇಂದ್ರ ಸಚಿವ ಅಮಿತ್ ಶಾ ರಣತಂತ್ರ ರೂಪಿಸಿದ್ದಾರೆ.
ಇಂದು ವರುಣಾ ಕ್ಷೇತ್ರದಲ್ಲಿ ಭರ್ಜರಿ ಪ್ರಚಾರ ಕೈಗೊಂಡಿದ್ದಾರೆ. ಮೈಸೂರು ಜಿಲ್ಲೆ ವರುಣಾ ಕ್ಷೇತ್ರ ವ್ಯಾಪ್ತಿಯ ಹೊಸಕೋಟೆ ಗ್ರಾಮದಲ್ಲಿ ಇಂದು ಬಿಜೆಪಿ ಸಮಾವೇಶ ಹಮ್ಮಿಕೊಂಡಿದ್ದು, ಕೇಂದ್ರ ಸಚಿವ ಅಮಿತ್ ಶಾ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಸಂಸದ ಶ್ರೀನಿವಾಸ ಪ್ರಸಾದ್ ಸೇರಿದಂತೆ ಹಲವು ನಾಯಕರು ಭಾಗವಹಿಸಲಿದ್ದಾರೆ. ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ಪರವಾಗಿ ನಾಯಕರು ಭರ್ಜರಿ ಪ್ರಚಾರ ನಡೆಸಲಿದ್ದು, ಗೆಲುವಿಗೆ ಕಾರ್ಯತಂತ್ರ ರೂಪಿಸಲಿದ್ದಾರೆ.